
ಬೆಂಗಳೂರು:ಪ್ರತಿ ಜಿಲ್ಲೆಯಲ್ಲಿಯೂ ಪತ್ರಿಕಾ ವಿತರಕರ ನೋಂದಣಿ ಮಾಡಿ, ಹೊಸ ಯೋಜನೆಗೆ ಸೇರ್ಪಡೆ ಮಾಡಲಾಗುವುದು ಎಂದು ಕಾರ್ಮಿಕ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ವಿತರಕರ ಪರವಾಗಿ ತಮ್ಮನ್ನು ಭೇಟಿ ಮಾಡಿ ಸಲ್ಲಿಸಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ, ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಹೊಸ ಯೋಜನೆಯ ಜಾರಿಗೆ ವಿತರಕರ ಸಹಕಾರ ಅಗತ್ಯವಾಗಿದೆ. ಯೋಜನೆ ಸದುಪಯೋಗಪಡಿಸಿಕೊಳ್ಳಲು ಸಂಘಟಿತರಾಗಿ ಮುಂದೆ ಬರುವಂತೆ ಅವರು ಸಲಹೆ ನೀಡಿದರು.ವಿತರಕರು ಅಪಘಾತ ಮತ್ತಿತರ ಸಂಕಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ನೆರವಾಗಲು ಯಾವುದೇ ಯೋಜನೆಗಳು ಇರಲಿಲ್ಲ ಎನ್ನುವುದನ್ನು ಸಿಎಂ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಅರಿತು, ಕಾರ್ಮಿಕ ಇಲಾಖೆ ಯೋಜನೆ ವ್ಯಾಪ್ತಿಗೆ ತರುವ ಮೂಲಕ ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಕೆಲಸವನ್ನು ಮಾಡಲಾಗಿದೆ ಎಂದರು.ಈ ಸಂದರ್ಭದಲ್ಲಿ ಕಾರ್ಮಿಕಾಧಿಕಾರಿ ರವಿಕುಮಾರ್ ಹಾಜರಿದ್ದರು .
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
