ತುಮಕೂರು:2024ರ ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿಕೂಟ I.N.D.I.A ಅಧಿಕಾರಕ್ಕೆ ಬರಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಭವಿಷ್ಯ ನುಡಿದಿದ್ದಾರೆ.
ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಪರಮೇಶ್ವರ್​ 2004ರಿಂದ 14ರವರೆಗೂ ಮನಮೋಹನ್​ ಸಿಂಗ್​​ 10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. 2014ರಲ್ಲಿ ಜನ ಬದಲಾವಣೆ ಬಯಸಿದ ಕಾರಣ ನರೇಂದ್ರ ಮೋದಿ ಅವರಿಗೆ ಅವಕಾಶ ಸಿಕ್ಕಿತ್ತು. ಈಗ ಅವರ ಆಡಳಿತಕ್ಕೂ 10 ವರ್ಷಗಳು ತುಂಬಿದ್ದು, ಜನ ಬದಲಾವಣೆಯ ನಿರೀಕ್ಷೆಯಲ್ಲಿದ್ದು, ವಿಪಕ್ಷಗಳ ಮೈತ್ರಿಕೂಟ I.N.D.I.A ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:VIDEO| ವಿಹಿಂಪ ರ್‍ಯಾಲಿ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು; ಹಲವರಿಗೆ ಗಂಭೀರ ಗಾಯ
ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿವೆ ಎಂದು ಸಮೀಕ್ಷೆಗಳು ಹೇಳುತ್ತಿರುವುದು ಸುಳ್ಳು. 2023ರ ವಿಧಾನಸಭೆ ಚುನಾವಣೆಯಲ್ಲಿ ಒಂದು ವಾಹಿನಿ ಮಾತ್ರ ಕಾಂಗ್ರೆಸ್​ 135 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ತೋರಿಸಿತ್ತು. ಉಳಿದ ವಾಹಿನಿಗಳು 50-60 ಸ್ಥಾನಗಳು ಗೆದ್ದರೆ ಹೆಚ್ಚು ಎಂದು ತೋರಿಸಿದ್ದವು. ಕೆಲವೊಮ್ಮೆ ಸಮೀಕ್ಷೆಗಳು ನಿಜವಾಗುವುದಿಲ್ಲ ಎಂದು ಕಳೆದ ವಿಧಾನಸಭೆ ಚುನಾವನೆಯಲ್ಲೇ ಎಲ್ಲರಿಗೂ ಅನುಭವವಾಗಿದೆ.
ಭಾರತ ಇಂದು ವಿಶ್ವಮಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಬಲಿಷ್ಠವಾಗಿ ಬೆಳೆಯುತ್ತಿರುವ ರಾಷ್ಟ್ರಗಳ ಪೈಕಿ ಒಂದಾಗಿದೆ. ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಇದಕ್ಕೆ ಭದ್ರ ಅಡಿಪಾಯವನ್ನು ಹಾಕಿಕೊಟ್ಟವರು. ಈಗಿನವರು ಒಂದಷ್ಟು ಕೆಲಸ ಮಾಡಿದ್ದಾರೆ. ದೇಶವನ್ನು ಬಲಪಡಿಸುವುದೇ ಎಲ್ಲರ ಉದ್ದೇಶವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + eight =
Remember me
