ಬೆಂಗಳೂರು:ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೂ ಕರೊನಾ ಸೋಂಕು ವ್ಯಾಪಿಸಿದೆ. 22 ವಿಚಾರಣಾಧೀನ ಕೈದಿಗಳಲ್ಲಿ ಬುಧವಾರ ಸೋಂಕು ಕಾಣಿಸಿಕೊಂಡಿದೆ. ಆದರೆ, ಇವರ ಸೋಂಕಿನ ಮೂಲ ಕಂಡು ಬಾರದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಮುಂಜಾಗ್ರತಾ ಕ್ರಮವಾಗಿ 2 ತಿಂಗಳ ಅವಧಿಯಲ್ಲಿ ಜೈಲು ಸೇರಿದ ಆರೋಪಿಗಳಿಗೆ ಕ್ವಾರಂಟೈನ್​ಗೆ ಒಳಪಡಿಸಲಾಗಿದ್ದು, ವೈದ್ಯಕೀಯ ವರದಿ ನಿರೀಕ್ಷಿಸಲಾಗಿದೆ. ಜೈಲಿನಲ್ಲಿ ಸೋಂಕು ಹರಡುವಿಕೆ ತಡೆಗೆ ಮುನ್ನಚ್ಚರಿಕೆ ವಹಿಸಲಾಗಿದೆ ಎಂದು ರಾಜ್ಯ ಬಂದೀಖಾನೆ ಇಲಾಖೆಯ ಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.
ಇದನ್ನೂ ಓದಿ:4ರಿಂದ ಕರ್ನಾಟಕ-ಕೇರಳ ಗಡಿ ಬಂದ್: ಕೇರಳ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
ನಿಮ್ಹಾನ್ಸ್​ನಲ್ಲಿ 5 ಸಿಬ್ಬಂದಿಗೆ ಸೋಂಕು:ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮತ್ತೆ ಐದು ಸಿಬ್ಬಂದಿಗೆ ಸೋಂಕು ತಗಲಿದೆ. ಈವರೆಗೆ ಒಟ್ಟು 15 ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದಾರೆ. ಸಾಮಾನ್ಯ ಚಿಕಿತ್ಸಾ ವಿಭಾಗದ ಸ್ಥಾನಿಕ ವೈದ್ಯಾಧಿಕಾರಿ, ಸ್ಟಾಫ್ ನರ್ಸ್, ಸ್ವಚ್ಛತಾ ನೌಕರ, ಲ್ಯಾಬ್​ನ ಡೇಟಾ ಆಪರೇಟರ್, ರಕ್ತನಿಧಿ ಕೇಂದ್ರದ ಸ್ಟಾಫ್ ನರ್ಸ್​ಗೆ ಸೋಂಕು ತಗುಲಿದೆ. ತುರ್ತು ಚಿಕಿತ್ಸೆ ಹಾಗೂ ಸಾಮಾನ್ಯ ಚಿಕಿತ್ಸಾ ವಿಭಾಗವನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.
ಭಾರಿ ಮಳೆಗೆ ಕಿತ್ಕೊಂಡು ಹೋಯ್ತು ಸೇತುವೆ- ಎಸ್ಸೆಎಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಗ್ನಿಶಾಮಕದಳದ ನೆರವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
