ಚಿಕ್ಕಮಗಳೂರು:ಗಣಪತಿ ಮೂರ್ತಿ ತರಲು ಹೋಗುವಾಗ ಟಾಟಾ ಏಸ್​ ಪಲ್ಟಿಯಾಗಿ ಇಬ್ಬರು ಯುವಕರು ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಮೃತರ ಕಣ್ಣುಗಳನ್ನು ದಾನ ಮಾಡಲು ಅವರ ಪೋಷಕರು ನಿರ್ಧರಿಸಿದ್ದು, ಇದರಿಂದ ನಾಲ್ವರು ಅಂಧರ ಬಾಳಿಗೆ ಬೆಳಕು ದೊರೆತಂತಾಗಿದೆ.
ಅಪಘಾತದಲ್ಲಿ ಲಿಂಗದಹಳ್ಳಿ ಗ್ರಾಮದ ಶ್ರೀಧರ (20 ವರ್ಷ) ಮತ್ತು ಧನುಷ್ (17 ವರ್ಷ) ಸ್ಥಳದಲ್ಲೇ ಮೃತಪಟ್ಟಿದ್ದರು. ಇತರ ಮೂವರು ಗಂಭೀರ ಗಾಯಗೊಂಡಿದ್ದರು. ಮೃತ ಯುವಕರ ಪೋಷಕರು ತಮ್ಮ ಮಕ್ಕಳ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದು, ತರೀಕೆರೆ ಆಸ್ಪತ್ರೆಯ ವೈದ್ಯರ ನೆರವಿನಿಂದ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ವೈದ್ಯರ ಸಲಹೆ ಮೇರೆಗೆ ಯುವಕರ ಪೋಷಕರಾದ ಕುಬೇಂದ್ರ-ಪದ್ಮಾ ಮತ್ತು ರಮೇಶ್-ಶೋಭಾ ಅವರು ತಮ್ಮ ಮಕ್ಕಳ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದರಿಂದ ನಾಲ್ವರು ಅಂಧರಿಗೆ ದೃಷ್ಟಿ ದೊರಕಿದಂತಾಗುತ್ತದೆ ಎಂದು ತರೀಕೆರೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ದೇವರಾಜು ತಿಳಿಸಿದ್ದಾರೆ.
ಲಿಂಗದಹಳ್ಳಿ ಪಟ್ಟಣದ 9 ಜನ ಯುವಕರು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು ತಮ್ಮ ಗ್ರಾಮದಿಂದ ತರೀಕೆರೆಗೆ ಹೋಗುತ್ತಿದ್ದರು. ಭೈರಾಪುರ ಗೇಟ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್​ ಉರುಳಿದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರಿಗೂ ಗಾಯಗಳಾಗಿದ್ದು, ಹೆಚ್ಚಿನ  ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 5 =
Remember me
