
ಬೆಂಗಳೂರು:ವೈದ್ಯಕೀಯ ವಿದ್ಯಾರ್ಥಿಗಳನ್ನು ರೂಪಿಸುತ್ತಿರುವ ಪರಿಶ್ರಮ ಸಂಸ್ಥೆಗೆ ಬೆಂಗಳೂರಿನಲ್ಲಿ ಸ್ವಂತ ಸೂರು ಕಲ್ಪಿಸಲು ನೆರವು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.ಪರಿಶ್ರಮ ಗ್ರೂಪ್ ಆ್ ಇನ್ಸ್‌ಟಿಟ್ಯೂಷನ್ಸ್ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ 2023-24ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.ಮಕ್ಕಳು ದೊಡ್ಡ ವ್ಯಕ್ತಿಗಳಾಗಿ ಬೆಳೆಯಬೇಕು, ವೈದ್ಯರಾಗಬೇಕು ಎಂಬುದು ಹಲವು ಪೋಷಕರ ಕನಸು. ಪ್ರದೀಪ್ ಈಶ್ವರ್ ಅವರು ಅನೇಕ ಪಾಲಕರ ಕನಸನ್ನು ನನಸು ಮಾಡುತ್ತಿದ್ದಾರೆ. ಇಲ್ಲಿ ಚಾಲಕರು, ಕೃಷಿಕರು ಸೇರಿ ಎಲ್ಲಾ ವರ್ಗದವರ ಮಕ್ಕಳನ್ನೂ ಸಹ ನೀಟ್ ಪರೀಕ್ಷೆಗೆ ತಯಾರಿ ಮಾಡಿ ಅವರಿಗೆ ಉತ್ತಮ ತರಬೇತಿ ನೀಡಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಂತೆ ಪ್ರೇರಿಪಿಸಿ ಸರ್ಕಾರಿ ಕೋಟಾದ ಸೀಟು ಸಿಗುವಂತೆ ಮಾಡುತ್ತಿರುವುದು ಶ್ಲಾಘನೀಯ ಎಂದರು.ಈ ವರ್ಷ ಸಾಕಷ್ಟು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿನ 250 ಸೀಟುಗಳ ಪೈಕಿ ಪರಿಶ್ರಮ ಸಂಸ್ಥೆಯಲ್ಲಿ ತೇರ್ಗಡೆಯಾದ ಸುಮಾರು 180 ಮಕ್ಕಳೇ ಇಲ್ಲಿ ಸೀಟು ಪಡೆಯುತ್ತಾರೆ ಎಂಬುದು ಕೇಳಿ ಸಂತಸವಾಯಿತು. ಪರಿಶ್ರಮ ಸಂಸ್ಥೆ ಇಂದು ವಿದ್ಯಾರ್ಥಿಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ್ದಾರೆ. ನೀವೆಲ್ಲರೂ ಈ ಸಂಸ್ಥೆಯ ರಾಯಭಾರಿಗಳಾಗಿದ್ದೀರಿ. ನೀವು ಈ ಸಂಸ್ಥೆಗೆ ಶಕ್ತಿ ತುಂಬಬೇಕು ಎಂದರು.ಪರಿಶ್ರಮ ಸಂಸ್ಥೆಯು ಹಲವು ಕಡೆಗಳಲ್ಲಿ ತರಬೇತಿ ನೀಡುತ್ತಿದೆ. ಇವೆಲ್ಲವನ್ನೂ ಒಟ್ಟುಗೂಡಿಸಿ ದೊಡ್ಡ ಸಂಸ್ಥೆ ಮಾಡಬೇಕು ಎಂಬುದು ಪ್ರದೀಪ್ ಈಶ್ವರ್ ಕನಸು. ಅವರಿಗೆ ಬೆಂಗಳೂರಿನಲ್ಲಿ ಉತ್ತಮ ಜಾಗ ತೋರಿಸಿ ಅಲ್ಲಿ ಪರಿಶ್ರಮದ ದೊಡ್ಡ ಸಂಸ್ಥೆ ಕಟ್ಟುವುದಕ್ಕೆ ನಮ್ಮ ಅಧಿಕಾರಾವಧಿಯಲ್ಲಿ ಸಹಕಾರ ನೀಡಲಾಗುವುದು ಎಂದರು.ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಮಾತನಾಡಿ, ನಮ್ಮ ಮಕ್ಕಳು ವೈದ್ಯರಾಗಬೇಕು ಎಂಬ ಅನೇಕ ಪೋಷಕರ ಕನಸನ್ನು ಪ್ರದೀಪ್ ಈಶ್ವರ್ ಅವರು ಪರಿಶ್ರಮ ಸಂಸ್ಥೆಯ ಮೂಲಕ ನನಸು ಮಾಡುತ್ತಿದ್ದಾರೆ. ಬಹಳ ಕಷ್ಟಪಟ್ಟು ಈ ಸಂಸ್ಥೆ ಕಟ್ಟಿದ್ದನ್ನು ನಾನು ನೋಡಿದ್ದೇನೆ. ಅತ್ಯಂತ ಕಡಿಮೆ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರ ನಂಬಿಕೆ, ವಿಶ್ವಾಸ ಗಳಿಸಿದ್ದಾರೆ ಎಂದರು.ಈ ಬಾರಿ ನೀಟ್ ಪರೀಕ್ಷೆ ಸಾಕಷ್ಟು ಗೊಂದಲ ಉಂಟು ಮಾಡಿದೆ. ಸುಮಾರು 65 ವಿದ್ಯಾರ್ಥಿಗಳು 720ಕ್ಕೆ 720 ಅಂಕಗಳನ್ನು ಪಡೆದಿರುವುದು ಮತ್ತು ಒಂದೇ ಸಂಸ್ಥೆಯ ಆರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿರುವುದು. ಕೆಲವಷ್ಟೇ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ ನೀಡಿರುವುದು ಹೀಗೆ ಅನೇಕ ಗೊಂದಲ ಉಂಟುಮಾಡಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟ ನಿಲುವು ತಳೆದು ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದರು.ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಪ್ರದೀಪ್ ಈಶ್ವರ್ ಬಹಳ ಸಾಮಾನ್ಯ ಹಿನ್ನೆಲೆಯಿಂದ ಬಂದು ಇಷ್ಟು ದೊಡ್ಡ ಮಟ್ಟದ ಸಾಧನೆ ಮಾಡುವ ಮೂಲಕ ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಪರಿಶ್ರಮ ನೀಟ್ ಅಕಾಡೆಮಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯುವ ಅವಕಾಶಗಳಿದ್ದು, ಈ ಸಂಸ್ಥೆಗೆ ಉತ್ತಮ ಭವಿಷ್ಯ ಇದೆ ಎಂದು ಹೇಳಿದರು. ಪರಿಶ್ರಮ ಗ್ರೂಪ್ ಆ್ ಇನ್ಸ್‌ಟಿಟ್ಯೂಷನ್ಸ್ ಸ್ಥಾಪಕ, ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಪರಿಶ್ರಮ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ನಡೆಯಬೇಕು ಎಂಬ ಉದ್ದೇಶದಿಂದ ಬೆಂಗಳೂರಿನಲ್ಲಿ ಉತ್ತಮ ಸಿಎ ನಿವೇಶನ ನೀಡುವಂತೆ ಡಿಸಿಎಂ ಬಿಡಿಎ ಅಧಿಕಾರಿಗಳಿಗೆ ಸೂಚನೆ ನೀಡಿರುವುದಕ್ಕೆ ಧ್ನಯವಾದ ಎಂದರು. ಈ ವರ್ಷದ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಂತಹ ಪರಿಶ್ರಮ ಸಂಸ್ಥೆಯ ಸುಮಾರು 20 ವಿದ್ಯಾರ್ಥಿಗಳನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − six =
Remember me
