
ಬೆಂಗಳೂರು:ಸಂಸತ್ ಭವನದ ಮೇಲಿನ ದಾಳಿ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾದೀಶರ ನೇತೃತ್ವದಲ್ಲಿ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಕ್ತಾರ ಎಂ.ಲಕ್ಷ್ಮಣ್, ಪ್ರಜಾಪ್ರಭುತ್ವದ ಮೇಲೆ ನಡೆದ ದಾಳಿ ಇದಾಗಿರುವ ಕಾರಣ ಪ್ರಕರಣವನ್ನುಗಂಭೀರವಾಗಿ ಪರಿಗಣಿಸಬೇಕು ಎಂದರು.ಬಿಜೆಪಿಯವರು 2024 ರ ಚುನಾವಣೆಗೆ ಭರ್ಜರಿ ಸಂಚನ್ನು ರೂಪಿಸಿದ್ದರು. ಆದರೆ ಇದು ಅವರಿಗೆ ತಿರುಗುಬಾಣವಾಗಿದೆ. ಪ್ರಕರಣವನ್ನು ಯಾವುದೇ ತನಿಖಾ ಸಂಸ್ಥೆಗೆ ನೀಡಿದರೂ ಮುಚ್ಚಿಹಾಕುತ್ತಾರೆ ಹಾಗೂ ವಿಪಕ್ಷದ ವಿರುದ್ದವಾಗಿ ಹೇಳಿಕೆ ನೀಡಿ ಇಡೀ ಪ್ರಕರಣದ ದಾರಿ ತಪ್ಪಿಸುತ್ತಾರೆ. ಆದ ಕಾರಣ ಮುಖ್ಯ ನ್ಯಾಯಾದೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಅವರೇ ಇದಕ್ಕೆ ನೇರ ಹೊಣೆ ಆದರೆ ಇವರ್ಯಾರು ಕೂಡ ಸಣ್ಣ ಪ್ರತಿಕ್ರಿಯೆ ನೀಡಿಲ್ಲ. ಕೇವಲ ಸುಳ್ಳುಗಳನ್ನೇ ಹಂಚುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯನೂ ಒಂದೂ ಟ್ವೀಟ್ ಮಾಡಿಲ್ಲ. ಆದರೆ ನೀಲಂ ಎನ್ನುವ ಮಹಿಳೆ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವ ಪೋಟೊ ಹಾಕಿ ಮುಖ್ಯ ವಿಚಾರ ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದರು.ಮನೋರಂಜನ್ ತಂದೆ ದೇವರಾಜೇಗೌಡ ಅವರು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿದ್ದರು ಎಂದು ಬಿಂಬಿಸಲು ಹೊರಟಿದ್ದರು. ಅದೂ ಆಗಲಿಲ್ಲ. ಸಂಸತ್ ಒಳಗೆ ನುಗ್ಗಿದವರಲ್ಲಿ ಒಬ್ಬ ವ್ಯಕ್ತಿ ಮುಸ್ಲಿಂ ಆಗಿದ್ದರೆ ಅಥವಾ ಕಾಂಗ್ರೆಸ್ ಸಂಸದರು ಪಾಸ್ ನೀಡಿದ್ದರೇ ಇಡೀ ದೇಶದಲ್ಲೇ ದಾಂಧಲೆ ನಡೆಸಲು ಬಿಜೆಪಿಯವರು ಸಜ್ಜಾಗುತ್ತಿದ್ದರು ಎಂದು ದೂರಿದರು.ಪ್ರಕರಣದಲ್ಲಿ ಪ್ರತಾಪ್ ಸಿಂಹ ಅವರಿಗೆ ಕನಿಷ್ಠ ಪಕ್ಷ ನೋಟಿಸ್ ನೀಡುವ ಕೆಲಸವನ್ನೂ ಮಾಡಿಲ್ಲ.ಸಿಎಂ, ಡಿಸಿಎಂ ಮತ್ತು ಪಕ್ಷ ನಾಯಕರ ಜೊತೆ ಚರ್ಚೆ ನಡೆಸಿ ಹೋರಾಟ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.
ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಮಾತನಾಡಿ, ಸಂಸತ್ ದಾಳಿಯ ಸಂಬಂಧ ಕೆಪಿಸಿಸಿ, ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದೆ. ಸಂಸದ ಪ್ರತಾಪ್ ಸಿಂಹ ಸಂಸತ್ ಪ್ರವೇಶಕ್ಕೆ ಈಗಾಗಲೇ 3 ಬಾರಿ ಪಾಸ್ ನೀಡಿರುವುದರಿಂದ, ಅವರನ್ನು ಸಂಸದ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ ಎಂದರು.ಎಲ್ಲದಕ್ಕೂ ಟ್ವೀಟ್ ಮೇಲೆ ಟ್ವೀಟ್ ಮಾಡುವ ಬಿಜೆಪಿಯವರು ಇದುವರೆಗೂ ಈ ವಿಚಾರದ ಬಗ್ಗೆ ದನಿ ಎತ್ತಿಲ್ಲ. ಟಿವಿ ಚರ್ಚೆಗೆ ಹೋಗಲು ನಿರಾಕರಿಸುತ್ತಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸತ್ತಿನ ಭದ್ರತೆಯ ವಿಚಾರವಾಗಿ ಸ್ಪೀಕರ್ ಉತ್ತರ ನೀಡುತ್ತಾರೆ ಎಂದು ಬಾಲಿಶವಾದ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪಲಾಯನವಾದ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದರು.ಮಾಜಿ ಮೇಯರ್ ರಾಮಚಂದ್ರಪ್ಪ ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − one =
Remember me
