ಮಂಗಳೂರು:ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ವಣಕ್ಕೆ ತಮ್ಮಿಂದಾದಷ್ಟು ನಿಧಿ ಸಮರ್ಪಿಸುವ ಮೂಲಕ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದರು.
ನಗರದ ವಿಶ್ವಹಿಂದು ಪರಿಷತ್ ಕಾರ್ಯಾಲಯದಲ್ಲಿ ಶುಕ್ರವಾರ ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಕಾರ್ಯಾಲಯ ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ವ್ಯಕ್ತಿಯೋರ್ವ ಕನಿಷ್ಠ 10 ರೂ., ಮನೆಯೊಂದರಿಂದ 100 ರೂ. ಹಾಗೂ ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ಗರಿಷ್ಠ ಮೊತ್ತವನ್ನು ನಿಧಿಗೆ ಸಮರ್ಪಿಸಲು ಅವಕಾಶವಿದೆ ಎಂದರು. ಮಂದಿರ ನಿರ್ಮಾಣ ಹಿಂದುಗಳಿಗೆ ಸ್ವಾಭಿಮಾನದ ಪ್ರತೀಕ, ಗೌರವದ ಸಂಕೇತ. ಶತಮಾನಗಳ ಹಿರಿಯರ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಮಕರ ಸಂಕ್ರಮಣದ ಮರುದಿನದಿಂದ 45 ದಿನ ನಿಧಿ ಅಭಿಯಾನ ನಡೆಯಲಿದೆ. ದೇಶದ ಮೂಲೆ ಮೂಲೆಗಳಿಗೆ ಕಾರ್ಯಕರ್ತರು ತೆರಳಿ ನಿಧಿ ಸಂಗ್ರಹಣೆ ಮಾಡಲಿದ್ದಾರೆ. ಸುಪ್ರೀಂ ಕೋರ್ಟ್ ಮಂದಿರ ನಿರ್ವಣಕ್ಕೆ ಮಾಡಿಕೊಟ್ಟಿರುವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು.
ವಿಶ್ವಹಿಂದು ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಯೋಧ್ಯೆಗೆ ಧಾರ್ವಿುಕತೆಯಲ್ಲಿ ಪ್ರಮುಖ ಸ್ಥಾನವಿದೆ. ಕೇಂದ್ರದಲ್ಲಿ 2 ಸೀಟ್​ಗಳನ್ನು ಹೊಂದಿದ್ದ ಬಿಜೆಪಿ ಶ್ರೀ ರಾಮನ ಹೆಸರಿನ ಆಂದೋಲನದ ಮೂಲಕ ಹಂತಹಂತವಾಗಿ ಬಲಿಷ್ಠಗೊಂಡು ಆಡಳಿತದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ. ಅಯೋಧ್ಯೆಯಲ್ಲಿ ಮಂದಿರ ನಿರ್ವಣಕ್ಕಾಗಿ ಲಕ್ಷಾಂತರ ಮಂದಿ ಬಲಿದಾನ ಮಾಡಿದ್ದಾರೆ. ಮಂದಿರ ನಿರ್ವಣಕ್ಕೆ ನಿಧಿ ಸಮರ್ಪಣೆ ಮೂಲಕ ಜನ ಸಾಮಾನ್ಯರಿಗೆ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗಲು ಅವಕಾಶ ಕಲ್ಪಿಸಲಾಗಿದೆ ಎಂದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹ ಸಂಘಚಾಲಕ ವಾಮನ ಶೆಣೈ, ವಿಭಾಗ ಸಂಘ ಚಾಲಕ ಗೋಪಾಲ ಚೆಟ್ಟಿಯಾರ್, ಆರೆಸ್ಸೆಸ್ ಪ್ರಮುಖ ಡಾ.ಕಲ್ಲಡ್ಕ ಪ್ರಭಾಕರ ಭಟ್, ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್​ವೆಲ್ ಉಪಸ್ಥಿತರಿದ್ದರು.
ದೇಶದಲ್ಲಿ ಪೂಜನೀಯ ಸ್ಥಾನದಲ್ಲಿರುವ, ಮನುಷ್ಯನ ಬದುಕಿನೊಂದಿಗೆ ಬೆರೆತಿರುವ ಗೋ ಸಂತತಿ ಉಳಿವಿಗೆ ಸರ್ಕಾರ ಗೋಹತ್ಯೆ ನಿಷೇಧ ಕರಿಣ ಕಾನೂನು ಜಾರಿಗೆ ಬರಬೇಕು. ಸರ್ಕಾರ ಕೈಗೊಂಡ ತೀರ್ವನಕ್ಕೆ ತಡೆಯಾಗಬಾರದು.
|ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಪೇಜಾವರ ಮಠ

ವಿಜಯವಾಣಿಯಲ್ಲಿ ಶುಕ್ರವಾರ ಮುಖಪುಟದಲ್ಲಿ ಪ್ರಕಟವಾದ ‘ಹೆಂಗಸರೇ ಹುಷಾರ್’ ವರದಿಗೆ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಹಿಳೆಯರು ಆರ್ಥಿಕ, ದೈಹಿಕ, ಮಾನಸಿಕವಾಗಿ ಶೋಷಣೆ ಗೊಳಗಾಗುತ್ತಿದ್ದಾರೆ. ಸಮಾಜದಲ್ಲಿ ನಡೆಯುವ ಅನ್ಯಾಯವನ್ನು ವಿಜಯವಾಣಿ ಸರ್ಕಾರದ ಮುಂದಿಟ್ಟಿದೆ. ಇದನ್ನು ತಡೆಯಲು ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + six =
Remember me
