ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಕಾವೇರಿ ನೀರಿನ ವಿಷಯದಲ್ಲಿ ಆರಂಭದಿಂದಲೂ ಅನುಮಾನಾಸ್ಪದವಾಗಿ ನಡೆದುಕೊಂಡಿದೆ. ಅದರ ಪರಿಣಾಮವಾಗಿ ನಮ್ಮ ವಿರುದ್ಧ ತೀರ್ಪು ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ ರವಿ, ತಮಿಳುನಾಡಿಗೆ ಮುಂಚಿತವಾಗಿಯೇ ನೀರು ಬಿಡಲು ನಿಮಗೇನಾದರೂ ಬೆದರಿಕೆ ಇತ್ತೇ? ಪಾರ್ಟಿಯಿಂದ ಒತ್ತಡ ಇತ್ತೇ? ಬೇಡಿಕೆ ಇಡುವ ಮೊದಲೇ ನೀರು ಬಿಟ್ಟಿದ್ದೇಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಐಎನ್​ಡಿಐಎ ಮೈತ್ರಿಕೂಟದ ಭಾಗವಾಗಲು ನೀರು ಬಿಡಿ ಎಂದು ಡಿಎಂಕೆ ಬೆದರಿಕೆ ಹಾಕಿರಬಹುದು. ಇಲ್ಲವೇ ಕಾಂಗ್ರೆಸ್ ಹೈಕಮಾಂಡ್ ಒತ್ತಡ ಹಾಕಿರಬಹುದು ಎಂದು ಸಂಶಯ ವ್ಯಕ್ತಪಡಿಸಿದರು.ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ, ಸಂಸದರ ಸಭೆ ನಡೆಸಿದ್ದನ್ನೂ ಅವರು ಟೀಕಿಸಿದರು. ಬಳಿಕ ಅಹವಾಲು ಮಂಡನೆಯನ್ನು ಆಕ್ಷೇಪಿಸಿದರು. ರಾಜ್ಯದ ರೈತರ ಸಂಕಷ್ಟ ದೂರ ಮಾಡುವುದರ ಬದಲು ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಲಾಭ ಪಡೆಯುವ ಪ್ರಯತ್ನ ಇದ್ದಂತಿದೆ. ಇದಕ್ಕೆ ಕರ್ನಾಟಕ ಬಲಿಪಶು ಆಗಿದೆ ಎಂದು ಅಭಿಪ್ರಾಯಪಟ್ಟರು.ವಾಸ್ತವಿಕ ಸ್ಥಿತಿಯನ್ನು ಸುಪ್ರೀಂ ಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ನಾವು ವಿಫಲವಾಗಿದ್ದೇವೆ ಎಂದು ತಿಳಿಸಿದರು.ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರವು ತಮಿಳುನಾಡು ಬೇಡಿಕೆ ಮುಂದಿಡುವುದಕ್ಕಿಂತ ಮುಂಚಿತವಾಗಿಯೇ ನೀರು ಬಿಡುವ ಮೂಲಕ ತಮ್ಮ ಉದಾರತೆಯನ್ನು ಪ್ರದರ್ಶನ ಮಾಡಿತ್ತು. ಅದರ ಪರಿಣಾಮವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ 42ರಷ್ಟು ನೀರಿನ ಕೊರತೆ ಇದ್ದರೂ ನೀರು ಬಿಟ್ಟಿದ್ದಾರೆ ಎಂದರು.ಕೆಆರ್‍ಎಸ್, ಕಬಿನಿ ಮತ್ತಿತರ ಡ್ಯಾಂಗಳು ಖಾಲಿಯಾಗಿವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಮ್ಮ ನೆರವಿಗೆ ಬರಲಿಲ್ಲ. ಸುಪ್ರೀಂ ಕೋರ್ಟಿನಲ್ಲಿ ನಮಗೆ ಸಹಾಯ ಆಗಬಹುದು ಎಂದುಕೊಂಡಿದ್ದರೂ ಸಹಾಯ ಆಗಿಲ್ಲ. ಮತ್ತೆ 15 ದಿನ ನೀರು ಬಿಡಲು ಸೂಚಿಸಿದ್ದಾರೆ ಎಂದು ವಿವರಿಸಿದರು.
ರೈತರು ಸಿಡಿದೆದ್ದಿದ್ದಾರೆ. ಎಲ್ಲ ರೀತಿಯ ಸಂಕಷ್ಟವನ್ನು ಎದುರಿಸಬೇಕಾದ ಪರಿಸ್ಥಿತಿ ನಮ್ಮ ಮುಂದಿದೆ ಎಂದು ಅವರು ಎಚ್ಚರಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × five =
Remember me
