ಬೆಂಗಳೂರು:ಸಂಘಟನೆಗೆ ಆದ್ಯತೆ ನೀಡದ ಶಾಸಕರು, ಮುಖಂಡರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರು, ವಿಧಾನಸಭಾ ಕ್ಷೇತ್ರವಾರು ಕನಿಷ್ಠ ಕಾರ್ಯಕರ್ತರ ಸಭೆ ನಡೆಸುವಂತೆ ಸೂಚಿಸಿದ್ದಾರೆ.
ಕರೊನಾ ಹಿನ್ನೆಲೆಯಲ್ಲಿ ಹತ್ತು ತಿಂಗಳಿಂದ ನಿಗದಿತವಾಗಿ ಯಾವುದೇ ಕಾರ್ಯಕ್ರಮಗಳನ್ನು ಪಕ್ಷದ ವೇದಿಕೆಯಲ್ಲಿ ಮಾಡಲು ಸಾಧ್ಯವಾಗಿಲ್ಲ. ಆದರೆ, ಬಿಜೆಪಿ ಆನ್​ಲೈನ್ ರ್ಯಾಲಿ, ಮತ್ತಿತರ ಪ್ರಯತ್ನಗಳ ಮೂಲಕ ಕಾರ್ಯಕರ್ತರನ್ನು ತಲುಪಲು ಪ್ರಯತ್ನಿಸುತ್ತಿದೆ. ಇಂತಹ ಹೊತ್ತಿನಲ್ಲಿ ಕಾರ್ಯಕರ್ತರ ಜತೆಯಲ್ಲಿ ಸಂಪರ್ಕ ಮತ್ತು ವಿಶ್ವಾಸ ಉಳಿಸಿಕೊಳ್ಳದೆ ಹೋದರೆ, ಮುಂದೆ ಅದಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಗೌಡರು ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಕ್ಷಣದಲ್ಲಿ ಗ್ರಾಪಂ ಚುನಾವಣೆ ಪ್ರಕಟಗೊಳ್ಳ ಬಹುದು. ಯುದ್ಧಕಾಲದಲ್ಲಿ ಶಸ್ತ್ರಭ್ಯಾಸ ಬಿಟ್ಟು, ಈಗಿನಿಂದಲೇ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬುವ ಮತ್ತು ಚುನಾವಣೆಗೆ ಅಣಿಗೊಳಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಶಿರಾದಲ್ಲಿ ಜೆಡಿಎಸ್ ಗೆದ್ದಿದ್ದರೂ, ಈ ಚುನಾವಣೆಯಲ್ಲಿ ಆ ಕ್ಷೇತ್ರವನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಮತ ಪಡೆಯುವುದರಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳುವಂತ ವಾತಾವರಣ ನಿರ್ವಣವಾಯಿತು ಎನ್ನುವುದನ್ನು ನೆನಪಿಸಿರುವ ಗೌಡರು, ಯಾವ ಕಾರಣಕ್ಕೂ ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡಬೇಡಿ ಎಂದು ಹೇಳಿದ್ದಾರೆ.
ಚುನಾವಣೆ ಬಳಿಕ ಶಿರಾ ಜೆಡಿಎಸ್ ಕಾರ್ಯಕರ್ತರ ಜತೆಗೂ ಸಮಾಲೋಚನೆ ನಡೆಸಿರುವ ಗೌಡರು, ಎದೆಗುಂದದೆ ಮುಂದಿನ ಚುನಾವಣೆಗೆ ಸಜ್ಜಾಗುವಂತೆ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 17 =
Remember me
