ಗುಂಡ್ಲುಪೇಟೆ:ಪಾರ್ವತಮ್ಮ ರಾಜ್​ಕುಮಾರ್​ ತಮ್ಮನ ಮಗ ನಟ ಸೂರಜ್​ಗೆ ಭೀಕರವಾದ ಅಪಘಾತದಲ್ಲಿ ​ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಈ ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ಸರಸ್ವತಿಪುರಂ ನಿವಾಸಿ ಧೀರಜ್ (28) ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರ (ಜೂನ್​ 24) ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೂರಜ್​ ಅವರು ಬೈಕ್​ನಲ್ಲಿ ಊಟಿಗೆ ತೆರಳುತ್ತಿದ್ದರು. ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಮೈಸೂರು ಕಡೆಯಿಂದ ಬರುತ್ತಿದ್ದ ಬುಲೆಟ್ ಬೈಕ್​​ಗೆ ಡಿಕ್ಕಿ ಸಂಭವಿಸಿದೆ.  ಈ ವೇಳೆ ಅವರ ಕಾಲಿನ ಮೇಲೆ ಟಿಪ್ಪರ್​ ಹರಿದಿದೆ. ಅವರ ಬಲಗಾಲು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಗಾಲು ಕತ್ತರಿಸಲಾಗಿದೆ ಎನ್ನಲಾಗಿದೆ.
ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.ಶಿವರಾಜ್​​ಕುಮಾರ್​​ ಹಾಗೂ ಕುಟುಂಬಸ್ಥರುಮೈಸೂರಿನ ಆಸ್ಪತ್ರೆಯತ್ತ ತೆರಳಿದ್ದಾರೆ.
ಪಾರ್ವತಮ್ಮ ಸಹೋದರ ಮೀಸೆ ಶ್ರೀನಿವಾಸ್ ಪುತ್ರ ಸೂರಜ್, ‘ಭಗವಾನ್​ ಶ್ರೀಕೃಷ್ಣ ಪರಮಾತ್ಮ’ ಸಿನಿಮಾದಲ್ಲಿ ನಟಿಸಿದ್ದರು.
ನೀತಾ ಅಂಬಾನಿ ಧರಿಸಿದ್ದ ಸೀರೆಯನ್ನು ತಯಾರಿಸಲು 1 ತಿಂಗಳು ಬೇಕಾಯ್ತಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 12 =
Remember me
