ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಅಭಿರುಚಿಯ ಟೀಕೆಗಳನ್ನು ಮಾಡಿದ್ದ ರಾಜ್ಯ ಕಾಂಗ್ರೆಸ್‌ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಕೊಳಕು ಮಂಡಲ ಕಾಂಗ್ರೆಸ್‌ಗೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ನಡೆಸಿದ ಸರ್ಜಿಕಲ್ ಸ್ಟ್ರೈಕ್‌ಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು ಎಂದು ಜೆಡಿಎಸ್ ಟಾಂಗ್ ಕೊಟ್ಟಿದೆ.
ಈಗ ಮುಖ ಉಳಿಸಿಕೊಳ್ಳಲು ಕರೆಂಟ್ ವೈರ್ ಮೊರೆ ಹೋಗಿದೆ ಕಾಂಗ್ರೆಸ್. ಗ್ಯಾರಂಟಿಗಳ ವೈಫಲ್ಯಕ್ಕೆ ದಿನ ಬೆಳಗಾದರೆ ಜನರಿಂದ ಕ್ಯಾಕರಿ ಉಗಿಸಿಕೊಳ್ಳುತ್ತಿರುವ ಆ ಪಕ್ಷ, ದಿಕ್ಕಿಲ್ಲದೆ ಅಪಾಯಕಾರಿ ಕರೆಂಟ್ ವೈರ್ ಹಿಡಿದುಬಿಟ್ಟಿದೆ. ದರಬೇಸಿ ಕಾಂಗ್ರೆಸ್ಸಿಗೆ ದಾರಿ ಕಾಣುತ್ತಿಲ್ಲ ಎಂದಿರುವ ಜೆಡಿಎಸ್, ಉತ್ತರಪ್ರದೇಶದಲ್ಲಿ ಮೂರಂಕಿಗೆ ಕುಸಿದಿತ್ತು. ತೆಲಂಗಾಣ ಸೇರಿ 5 ರಾಜ್ಯಗಳಲ್ಲಿ ಏದುಸಿರು ಬಿಡುತ್ತಿದೆ. ವಿಕಾರ, ವಿಕೃತಿಗೆ ತುತ್ತಾಗಿ ಕತ್ತಲಾದ ಮೇಲೆ ಗೋಡೆ ಮೇಲೆ ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ ‘ಶಿಖಂಡಿ’ಸ್ಥಿತಿಗೆ ಬಂದಿದೆ ಎಂದು ಪ್ರಹಾರ ನಡೆಸಿದೆ.
ಕುಮಾರಸ್ವಾಮಿ ಅವರು ಸ್ಪಷ್ಟನೆ ಕೊಟ್ಟ ಮೇಲೂ ಕಾಂಗ್ರೆಸ್ ವಿಕೃತಿ ಮಿತಿಮೀರಿದೆ. ಬೆಸ್ಕಾಂ ವಿದ್ಯುತ್ ವೇಗದಲ್ಲಿ ಎಫ್ ಐಆರ್ ದಾಖಲಿಸಿದೆ. ಕುಮಾರಸ್ವಾಮಿ ಅವರು ತಿಹಾರ್ ಜೈಲಿಗೆ ಹೋಗುವ ತಪ್ಪೇನೂ ಮಾಡಿಲ್ಲ. ಇಡಿ, ಸಿಬಿಐ, ಐಟಿ ಅವರ ಬೆನ್ಹತ್ತಿಲ್ಲ. ಪುಡಿರೌಡಿ ‘ಕಿಡಿಗೇಡಿಕುಮಾರ’ನ ಕೈಚಳಕಕ್ಕೆ ಹೆದರುವ ಪ್ರಶ್ನೆಯೂ ಇಲ್ಲ ಎಂದು ಜೆಡಿಎಸ್ ಹೇಳಿದೆ.
ಹಳ್ಳ ಹಿಡಿದ ಗ್ಯಾರಂಟಿಗಳು ಕಾಂಗ್ರೆಸ್ಸಿನಲ್ಲಿ ಹಾಲಾಹಲವನ್ನೇ ಸೃಷ್ಟಿಸಿವೆ ಎನ್ನುವುದಕ್ಕೆ ಕುಮಾರಸ್ವಾಮಿ ಅವರ ಮನೆಯ ಕರೆಂಟ್ ವೈರ್ ಕೊಟ್ಟ ಶಾಕೇ ಸಾಕ್ಷಿ. ರಾಜಕೀಯವಾಗಿ ಅವರನ್ನು ಎದುರಿಸಲಾಗದ ನರಸತ್ತ ಪಕ್ಷ, ಕರೆಂಟ್ ವೈರ್ ಹಿಡಿದು ‘ಶಕುನಿ ಯುದ್ಧ’ ಆರಂಭಿಸಿದೆ. ಯುದ್ಧಕ್ಕೆ ನಾವೂ ಸಿದ್ಧರಿದ್ದೇವೆ ಎಂದು ಜೆಡಿಎಸ್‌ಸವಾಲು ಹಾಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eight =
Remember me
