ಚಾಮರಾಜನಗರ:ಸರ್ಕಾರ ಯಶಸ್ವಿನಿ ಯೋಜನೆ ಮರುಸ್ಥಾಪನೆ, ರಾಜ್ಯಾದ್ಯಂತ ಜನತಾ ಕ್ಲಿನಿಕ್ ಆರಂಭ ಮುಂತಾದ ಯೋಜನೆಗಳನ್ನು ಘೋಷಿಸಿದ್ದಾಗ, ಹೊಸ ಯೋಜನೆಗಳನ್ನು ಆರಂಭಿಸುವ ಜತೆಗೆ ಇರುವ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವಂತೆ, ಸರಿಯಾದ ಸೌಲಭ್ಯ ಇರುವಂತೆ ನೋಡಿಕೊಳ್ಳುವುದೂ ಅತಿಮುಖ್ಯ ಎಂಬುದಾಗಿ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆ ಅಭಿಪ್ರಾಯಕ್ಕೆ ಪೂರಕ ಎನ್ನುವಂತೆ ಇದೀಗ ಘಟನೆಯೊಂದು ನಡೆದಿದೆ.
ಚಾಮರಾಜನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿನ ಅವ್ಯವಸ್ಥೆಯಿಂದಾಗಿ ರೋಗಿಯೊಬ್ಬರು ಸಾವಿಗೀಡಾಗಿದ್ದಾರೆ. ತೆರಕಣಾಂಬಿ ಗ್ರಾಮದ ಮಹೇಶ್ (33) ಎಂಬವರು ಸಾವಿಗೀಡಾದ ವ್ಯಕ್ತಿ. ಎದೆನೋವಿನಿಂದ ಬಳಲುತ್ತಿದ್ದ ಇವರು ತೆರೆಕಣಾಂಬಿ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಆದರೆ ಅಲ್ಲಿನ ಅವ್ಯವಸ್ಥೆಯಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಲಭಿಸದೆ ಮೃತಪಟ್ಟಿದ್ದರು.
ಮಹೇಶ್ ಆಸ್ಪತ್ರೆಗೆ ತೆರಳಿದ್ದಾಗ ಅಲ್ಲಿ ವೈದ್ಯರು ಇರಲಿಲ್ಲ. ಆ್ಯಂಬುಲೆನ್ಸ್ ಇದ್ದರೂ ಚಾಲಕ ಇರಲಿಲ್ಲ. ಹೀಗಾಗಿ ಮಹೇಶ್​ಗೆ ಅಗತ್ಯ ಚಿಕಿತ್ಸೆ ತಕ್ಷಣ ಸಿಗದೆ ಸಾವಿಗೀಡಾಗಿದ್ದಾರೆ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಎಚ್​ಒ ಡಾ.ವಿಶ್ವೇಶ್ವರಯ್ಯ ಅವರು ತೆರಕಣಾಂಬಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರೊಂದಿಗೆ ಸಭೆ ನಡೆಸಿದ ಅವರು, ಆಸ್ಪತ್ರೆ ಸಿಬ್ಬಂದಿ, ವೈದ್ಯರು ಹಾಗೂ ಆ್ಯಂಬುಲೆನ್ಸ್ ಚಾಲಕರಿಗೆ ಸ್ಥಳದಲ್ಲಿ ಇರುವಂತೆ ಸೂಚನೆ ನೀಡಿದ್ದಾರೆ.
ಫ್ಲೈಓವರ್​ನಿಂದ ಹಳ್ಳಕ್ಕೆ ಬಿದ್ದ ಕಾರು; ಮೂವರ ಸ್ಥಿತಿ ಚಿಂತಾಜನಕ, ನಾಲ್ವರಿಗೆ ಗಂಭೀರ ಗಾಯ..

ಅನ್​ಲೋಡ್ ಮಾಡುವಾಗ ಜೀವವೇ ಹೋಯ್ತು; ಹೃದಯಕ್ಕೇ ಹಾನಿಯಾಗಿ ನಿಂತಲ್ಲೇ ಸಾವು..


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − two =
Remember me
