ಹುಬ್ಬಳ್ಳಿ:ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪಾಪು ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ, ಶತಾಯುಷಿ, ನಾಡೋಜ ಡಾ. ಪಾಟೀಲ ಪುಟ್ಟಪ್ಪ ಇಂದು ನಿಧನರಾದರು.
ಅವರಿಗೆ 101 ವರ್ಷ ವಯಸ್ಸಾಗಿತ್ತು. ವಯೋಸಜಹ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕರ್ನಾಟಕದ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡದ ಅಸ್ಮಿತೆಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪಾಟೀಲ ಪುಟ್ಟಪ್ಪ ಹಲವಾರು ಕನ್ನಡ ಪರ ಹೋರಾಟಗಳ ನೇತೃತ್ವವನ್ನು ವಹಿಸಿದ್ದರು. ಪತ್ರಕರ್ತರು, ಲೇಖಕರಾಗಿ ಹೆಸರು ಗಳಿಸಿದ್ದರು. ಎರಡು ಅವಧಿಗೆ ರಾಜ್ಯಸಭಾ ಸದಸ್ಯರೂ ಆಗಿದ್ದರು.
ಪಾಟೀಲ ಪುಟ್ಟಪ್ಪನವರು 1921ರ ಜನವರಿ 14ರಂದು ಹಾವೇರಿಯ ಕುರಬಗೊಂಡದಲ್ಲಿ ಜನಿಸಿದ್ದರು. ನಾಡೋಜ ಪ್ರಶಸ್ತಿ ಪುರಸ್ಕೃತರಾದ ಪಾಪು ಅವರಿಗೆ  ಮಾ.17 ರಂದು ರಾಷ್ಟ್ರೀಯ ಬಸವ ಪ್ರಶಸ್ತಿ ಪ್ರದಾನ ಮಾಡುವುದಿತ್ತು. 2017 ರ ರಾಷ್ಟ್ರೀಯ ಬಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್.ರಂಗಪ್ಪ ನಾಳೆ ಮಧ್ಯಾಹ್ನ 2 ಗಂಟೆಗೆ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಲಾಗಿತ್ತು.
ಗಲ್ಲಿಗೇರಲು 4 ದಿನ ಬಾಕಿ ಇರುವಾಗ ಫುಲ್ ಅಲರ್ಟ್; ​ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ ನಿರ್ಭಯಾ ಅತ್ಯಾಚಾರ ಅಪರಾಧಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − four =
Remember me
