
ಬೆಂಗಳೂರು:ಪತ್ರಿಕಾ ವಿತರಕರುಗಳ ಬೇಡಿಕೆಗಳನ್ನು ಸರ್ಕಾರ ಸಹಾನುಭೂತಿಯಿಂದ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ತಿಳಿಸಿದ್ದಾರೆ.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ಅವರುಗಳು ವಿಧಾನಸೌಧದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.ಕಾರ್ಮಿಕ ಇಲಾಖೆಯ ಮೂಲಕ ಪತ್ರಿಕಾ ವಿತರಕರಿಗೆ ಸೌಲಭ್ಯ ಕೊಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಪತ್ರಿಕೆ ಹಾಕುವಾಗ ಮೃತಪಟ್ಟವರಿಗೆ ಮತ್ತು ಅಪಘಾತದಲ್ಲಿ ಗಾಯಗೊಂಡ ಪತ್ರಿಕಾ ವಿತರಕರಿಗೆ ನೆರವು ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೋಷಣೆ ಮಾಡಿ ಅನುಷ್ಠಾನಕ್ಕೆ ತಂದಿದ್ದಾರೆ ಎಂದು ಹೇಳಿದರು.ಚಿತ್ರದುರ್ಗದಲ್ಲಿ ಪತ್ರಿಕಾ ವಿತರಕರಿಗೆ ನಿವೇಶನವನ್ನು ನೀಡಲಾಗಿದ್ದು, ಅದು ತಾಂತ್ರಿಕ ಕಾರಣಕ್ಕಾಗಿ ನನೆಗುದಿಗೆ ಬಿದ್ದಿದೆ. ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳುವಂತೆ ವಿನಂತಿಸಿದಾಗ, ತಕ್ಷಣವೇ ಕಂದಾಯ ಇಲಾಖೆ ಸಚಿವಾಲಯಕ್ಕೆ ಪೋನಾಯಿಸಿದ ಕೆ.ವಿ.ಪ್ರಭಾಕರ್ ಅವರು, ಸಮಸ್ಯೆಯನ್ನು ಶೀಘ್ರವಾಗಿ ಇತ್ಯರ್ಥ ಮಾಡಿ ನಿವೇಶನ ನೀಡುವಂತೆ ಸೂಚಿಸಿದರು.ಚಿತ್ರದುರ್ಗದಲ್ಲಿ ನಡೆಸಲು ಉದ್ದೇಶಿಸಿರುವ ಪತ್ರಿಕಾ ವಿತರಕರ ದಿನಾಚರಣೆಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಇದೇ ಸಂದರ್ಭದಲ್ಲಿ ಆಹ್ವಾನಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fifteen =
Remember me
