ತುಮಕೂರು:ಸಿದ್ದಗಂಗಾ ಮಠಕ್ಕೆ ನೂತನ ಪಟ್ಟಾಧಿಕಾರಿಗಳ ನೇಮಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯಲಿದ್ದು, ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ.
ನೂತನವಾಗಿ ಆಯ್ಕೆಯಾಗಿರುವ ಮೂವರಿಗೂ ಇಂದು ಉತ್ತರಾಧಿಕಾರಿಯಾಗಿ ಪಟ್ಟಾಭಿಷೇಕ ನಡೆಯಲಿದೆ. ಸಿದ್ದಗಂಗಾ ಮಠದ ಆಡಳಿತ ಮಂಡಳಿಯಿಂದ ಕಾರ್ಯಕ್ರಮ ಆಯೋಜನೆಗೊಂಡಿದೆ.
ತುಮಕೂರಿನ ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್, ರಾಮನಗರ ಜಿಲ್ಲೆ,‌ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಉತ್ತರಾಧಿಕಾರಿಯಾಗಿ ಹರ್ಷ ಹಾಗೂ ವಿಜಯಪುರ ಬಸವಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಗೌರಿ ಕುಮಾರ್​ ಅವರನ್ನು ಸಿದ್ದಗಂಗಾ ಮಠದ ಆಡಳಿತ ಮಂಡಳಿ ನೇಮಕ ಮಾಡಿದೆ.
ಇದನ್ನೂ ಓದಿ:ಏರುಗತಿಯಲ್ಲಿ ಬಿಜೆಪಿ ಮತಗಳಿಕೆ: 2ರಿಂದ 110 ಶಾಸಕರ ತನಕ ಕಮಲ ಪಯಣ; ಕಾಂಗ್ರೆಸ್, ಜನತಾಪಕ್ಷದ್ದೂ ದಾಖಲೆ
ಇಂದು ಬಸವ ಜಯಂತಿ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಶ್ರೀ ಮಠದ ಭಕ್ತಾದಿಗಳು, ಸಾರ್ವಜನಿಕರು ಹಾಗೂ ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿದ್ದಗಂಗಾ ಮಠದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ಆರಂಭವಾಗಿದೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಮೂಲಕ ಆರಂಭವಾಗಿದೆ.
ಈ ವಿಶೇಷ ಪೂಜೆಯಲ್ಲಿ ಸಿದ್ದಲಿಂಗ ಸ್ವಾಮೀಜಿ ಸೇರಿ ಅನೇಕ ಮಠಾಧೀಶರುಗಳು ಭಾಗಿಯಾಗಿದ್ದಾರೆ.(ದಿಗ್ವಿಜಯ ನ್ಯೂಸ್​)
ನಿರಂತರ ಸ್ಫೂರ್ತಿಚೇತನ: ಬಸವ ಜಯಂತಿ ಪ್ರಯುಕ್ತ ಬಿಎಸ್​ವೈ ಲೇಖನ

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

‘ಜನವಾಹಿನಿ’ ಹೆಸರಿನಲ್ಲಿ ಮ್ಯಾರಥಾನ್​ ಕ್ಯಾಂಪೇನ್​ಗೆ ಮುಂದಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 8 =
Remember me
