ತುಮಕೂರು:ಪಾವಗಡದಲ್ಲಿ ಇಂದು ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಐವರು ಸಾವಿಗೀಡಾಗಿದ್ದಾರೆ. ಮತ್ತೊಂದೆಡೆ ಒಂದಿಡೀ ಬಸ್​ ಜನರು ಗಾಯಗೊಂಡಿದ್ದಾರೆ ಎಂಬಷ್ಟು ಮಂದಿ ಗಾಯಾಳುಗಳಾಗಿದ್ದಾರೆ. ಗಾಯಾಳುಗಳ ಕುರಿತ ನಿಖರ ಮಾಹಿತಿಯನ್ನು ಇದೀಗ ಸಾರಿಗೆ ಸಚಿವರೇ ಅಧಿಕೃತವಾಗಿ ತಿಳಿಸಿದ್ದಾರೆ.
ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದ್ದು, ಐವರು ಸಾವಿಗೀಡಾಗಿದ್ದಾರೆ. ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಈ ಬಸ್​ ಅಪಘಾತದಲ್ಲಿ ಆರಂಭದಲ್ಲಿ 25ಕ್ಕೂ ಮಂದಿ ಗಾಯಗೊಂಡಿದ್ದರು ಎನ್ನಲಾಗಿತ್ತು. ಆದರೆ ಈಗ ಸ್ಪಷ್ಟ ಚಿತ್ರಣ ಸಿಕ್ಕಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಇಂದು ಮತ್ತೊಂದು ಬಸ್​ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ…
ಘಟನಾ ಸ್ಥಳಕ್ಕೆ ಸಾರಿಗೆ ಸಚಿವ ಶ್ರೀರಾಮುಲು ತೆರಳಿ, ಸೂಕ್ತ ಕ್ರಮಕೈಗೊಂಡಿದ್ದಾರೆ. ಮುಖ್ಯಮಂತ್ರಿಯವರೇ ನನ್ನನ್ನು ಸ್ಥಳ ಪರಿಶೀಲನೆಗೆ ಕಳುಹಿಸಿದ್ದು, ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ರೀತಿ ಆಗಿದೆ. ಇಂಥ ದುರಂತ ಇನ್ನೆಲ್ಲೂ ಆಗಬಾರದು. ತುಮಕೂರು-ಪಾವಗಡಗಲ್ಲಿ ಸರ್ಕಾರಿ ಬಸ್ ವ್ಯವಸ್ಥೆ ಆಗಬೇಕು. ಆ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟವರ ಬಳಿ ಮಾತನಾಡಿ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಬಸ್​, ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..
ಇನ್ನು ಅಪಘಾತದಲ್ಲಿ ಗಾಯಗೊಂಡವರ ಕುರಿತು ಮಾಹಿತಿ ನೀಡಿದ ಅವರು, ಈ ಅಪಘಾತದಲ್ಲಿ ಐವರು ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 17 ಮಂದಿ ತುಮಕೂರು ಆಸ್ಪತ್ರೆಯಲ್ಲಿ, ಮತ್ತೊಂದು ಆಸ್ಪತ್ರೆಯಲ್ಲಿ 47 ಮಂದಿ, ಇನ್ನು ಕೆಲವರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದರು.
ಅಮ್ಮನೆದುರೇ ಮಗಳ ಕುತ್ತಿಗೆ ಮೇಲೆ ಸಾಗಿದ ಆಟೋ; ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eight =
Remember me
