ಬೆಂಗಳೂರು:ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಸೇರಿದಂತೆ ಹಲವರು ಜೈಲು ಸೇರಿದ್ದಾರೆ. ಹೊರಗೆ ಐಷಾರಾಮಿ ಜೀವನ ನಡೆಸುತ್ತಿದ್ದರು ಪವಿತ್ರಾ ಗೌಡ ಹಾಗೂ ದರ್ಶನ್​ ಅವರು ಜೈಲಿನ ವಾತಾವರಣ ಹೊಂದಾಣಿಕೆ ಆಗದೆ ಜೈಲು ಸೇರಿದ್ದಾರೆ.
ಕೆಲವು ದಿನಗಳ ಹಿಂದೆ ದರ್ಶನ್​​ ಆರೋಗ್ಯದಲ್ಲಿ ಏರುಪೇರಾಗಿತ್ತು. ಜೈಲಿನಲ್ಲಿಯೇ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ ದರ್ಶನ್ ಈಗ ತುಸು ಗುಣಮುಖರಾಗಿದ್ದಾರೆ. ಅದೇ ಪ್ರಕರಣದ ಆರೋಪಿ ಪವಿತ್ರಾ ಗೌಡಗೂ ಅನಾರೋಗ್ಯ ಉಂಟಾಗಿದೆ.
ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸುವ ಮುನ್ನವೂ ಅವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದರು. ಪೊಲೀಸರು ಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡಾಗಲೂ ಸಹ ಎರಡು ಬಾರಿ ಬಿಪಿ ಲೋ ಹಾಗೂ ಇತರೆ ಸಮಸ್ಯೆಗಳಿಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈಗ ಜೈಲಿನಲ್ಲಿಯೂ ಪವಿತ್ರಾಗೆ ಅನಾರೋಗ್ಯ ಮುಂದುವರೆದಿದೆ.
ದರ್ಶನ್ ರೀತಿಯಲ್ಲಿಯೇ ಪವಿತ್ರಾ ಗೌಡಗೂ ಸಹ ಜೈಲಿನ ಆಹಾರ ದೇಹಕ್ಕೆ ಸರಿಹೊಂದುತ್ತಿಲ್ಲವಂತೆ. ಹೀಗಾಗಿ ಎರಡು ದಿನಗಳ ಹಿಂದೆ ಆಸ್ಪತ್ರೆ ವಾರ್ಡ್​​ನಲ್ಲಿ ಜನರಲ್ ಚೆಕಪ್ ಮಾಡಿಸಿದ್ದಾರೆ. ಪವಿತ್ರಾ ಗೌಡ ಅವರ ಆರೋಗ್ಯ ಸುಧಾರಣೆ ಕಂಡಿದ್ದು, ಉಪಹಾರದ ಬದಲಿಗೆ ಹೆಚ್ಚಾಗಿ ಹಣ್ಣುಗಳನ್ನು ಸೇವಿಸುವಂತೆ ಸಲಹೆ ನೀಡಿದ್ದಾರಂತೆ ವೈದ್ಯರು.
ಏನಿದು ಪ್ರಕರಣ?ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:16 + ten =
Remember me
