ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಸೇರಿದಂತೆ 19 ಮಂದಿ ಆರರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದಿನ ಕಳೆದಂತೆ ವಿಚಾರಣೆಯನ್ನು ತೀವ್ರಗೊಳಿಸಲಾಗುತ್ತಿದೆ. ಇತ್ತ ತನಿಖೆ ಸಾಗಿದಂತೆ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೇಣುಕಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ಇರಿಸಲಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡರನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ವಿಚಾರಣೆ ಸಮಯದಲ್ಲಿ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗುತ್ತಿತ್ತು. ಇಂದು (ಜೂನ್ 18) ವಿಚಾರಣೆ ಸಮಯದಲ್ಲಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಪೊಲೀಸರು ಕೂಡಲೇ ಠಾಣೆಗೆ ವೈದ್ಯರನ್ನು ಕರೆಸಿ ಪರಿಶೀಲಿಸಿದ ಬಳಿಕ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ.
ನಾಗರಭಾವಿಯಲ್ಲಿರುವ ಮಲ್ಲತಹಳ್ಳಿ ಸರ್ಕಾರಿ ಆಸ್ಪತ್ರೆಗೆ ಪವಿತ್ರಾರನ್ನು ದಾಖಲು ಮಾಡಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆ ಮುಗಿಯುತ್ತಿದ್ದಂತೆ ಮತ್ತೆ ಠಾಣೆಗೆ ಪವಿತ್ರಾ ಗೌಡರನ್ನು ಪೊಲೀಸರು ಕರೆದುಕೊಂಡು ಹೋಗಲಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಆಪ್ತೆ ಪವಿತ್ರಾ ಗೌಡರನ್ನು FIRನಲ್ಲಿ A1 ಎಂದು ಹೆಸರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 15 =
Remember me
