ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್​ ಆಪ್ತೆ ಪವಿತ್ರಾ ಗೌಡ ಬಂಧನವಾದ 72 ದಿನಗಳ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಆಗಸ್ಟ್​ 22ರಂದು ವಿಚಾರಣೆ ನಡೆಯಲಿದೆ.
ಜಾಮೀನು ಕೋರಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​ಗೆ ಪವಿತ್ರಾ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಪವಿತ್ರಾ ಗೌಡ ಜೊತೆಗೆ ಪ್ರಕರಣದ ಏಳನೇ ಆರೋಪಿಯಾಗಿರುವ ಅನುಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ (ಆಗಸ್ಟ್​ 19) ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಆಗಸ್ಟ್​ 22ಕ್ಕೆ ಮುಂದೂಡಿದೆ.
ಇದನ್ನೂ ಓದಿ:ಯಾವುದೇ ಕಾರಣಕ್ಕೂ ಬಾಂಗ್ಲಾದೇಶದ ವಿರುದ್ಧ ಸರಣಿ ನಡೆಸುವಂತಿಲ್ಲ; ರಕ್ತದಲ್ಲಿ ಪತ್ರ ಬರೆದು ಆಗ್ರಹಿಸಿದ ಹಿಂದೂ ಮಹಾಸಭಾ
ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್​ ಆ್ಯಂಡ್​ ಗ್ಯಾಂಗ್​ಗೆ ನ್ಯಾಯಾಲಯ ಆಗಸ್ಟ್​ 28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 200ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಶೇ. 70ರಷ್ಟು ಸಾಕ್ಷ್ಯಗಳ ಎಫ್​ಎಸ್​ಎಲ್ ವರದಿಗಳು ಪೊಲೀಸರ ಕೈ ಸೇರಿವೆ. ಇನ್ನುಳಿದ ಸಾಕ್ಷ್ಯಗಳ ಎಫ್​ಎಸ್​ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
ಹೈದರಾಬಾದ್​ಗೆ ಕಳಿಸಲಾಗಿರುವ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಉಪಕರಣಗಳು, ಸಿಸಿ ಕ್ಯಾಮೆರಾ, ಆಡಿಯೋ ಸ್ಯಾಂಪಲ್ಸ್, ಮೊಬೈಲ್ ಡೇಟಾ ರಿಪೋರ್ಟ್ ಎಫ್​ಎಸ್​ಎಲ್ ವರದಿಗಳು ಮಾತ್ರವೇ ಬರಬೇಕಿದೆ. ಇನ್ನು 30% ವರದಿಗಳು ಮಾತ್ರವೇ ಬರಬೇಕಿದ್ದು, ಈ ವರದಿಗಳು ಪೊಲೀಸರ ಕೈ ಸೇರಿದ ನಂತರ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್​ಶೀಟ್​ ಸಲ್ಲಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
