ಮಂಡ್ಯ:ಬಿಜೆಪಿ, ಕಾಂಗ್ರೆಸ್‌ನ ‘ಪೇ’ ಪೋಸ್ಟರ್ ರಾಜಕೀಯಕ್ಕೆ ಸೆಡ್ಡು ಹೊಡೆದಿರುವ ರಾಜ್ಯ ರೈತ ಸಂಘ ಪ್ರತಿ ಟನ್ ಕಬ್ಬಿಗೆ 4,500 ರೂ ನಿಗದಿ ಮಾಡುವಂತೆ ನಡೆಸುತ್ತಿರುವ ‘ಪೇ ಫಾರ್ಮರ್’ ಅಭಿಯಾನವನ್ನು ತೀವ್ರಗೊಳಿಸಿದೆ. ಅದರಂತೆ ಸೋಮವಾರ ನಗರದಲ್ಲಿ ಸರ್ಕಾರಿ ಬಸ್‌ಗಳಿಗೆ ಹಾಗೂ ಗೋಡೆಗಳಿಗೆ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು.ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾವಣೆಗೊಂಡ ರೈತ ಸಂಘದ ಪದಾಧಿಕಾರಿಗಳು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್‌ಗಳಿಗೆ ಪೋಸ್ಟರ್ ಅಂಟಿಸಿದರು. ಅಂತೆಯೇ ತಮ್ಮ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕೆಂದು ಘೋಷಣೆ ಕೂಗಿ ಒತ್ತಾಯಿಸಿದರು. ಸರ್ಕಾರ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿಯವರು ರಾಜಕೀಯಕ್ಕಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಆದರೆ ನಮ್ಮ ನ್ಯಾಯಯುತ ಬೇಡಿಕೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಅವರು ಶೇ.40ರಷ್ಟು ಲಂಚ ತೆಗೆದುಕೊಳ್ಳುತ್ತಾರೆ, ಇವರು ಶೇ.10ರಷ್ಟು ಲಂಚ ಪಡೆಯುತ್ತಾರೆನ್ನುವ ಕೆಟ್ಟ ರಾಜಕೀಯ ನಮಗೆ ಬೇಡ. ಈ ರೀತಿ ನಾಟಕವಾಡಿಕೊಂಡು ರೈತರಿಗೆ ಮಂಕುಬೂದಿ ಎರಚಿದ್ದು ಸಾಕು ಎಂದು ವಾಗ್ದಾಳಿ ನಡೆಸಿದರು.ಐದು ವರ್ಷದಲ್ಲಿ ಚುನಾವಣೆ ವೇಳೆಗೆ ಮಾತ್ರ ರೈತರನ್ನು ನೆನೆಪಿಸಿಕೊಳ್ಳುವ ರಾಜಕೀಯ ಪಕ್ಷಗಳು, ಸದನದಲ್ಲಿಯೂ ರೈತರ ಬಗ್ಗೆ ಚರ್ಚೆ ಮಾಡುವುದಿಲ್ಲ. ಕಬ್ಬಿಗೆ ಹಾಲಿ ನಿಗದಿಯಾಗಿರುವ ದರದಿಂದ ಯಾವುದೇ ಲಾಭ ಸಿಗುವುದಿಲ್ಲ. ಕೂಲಿ ಖರ್ಚು ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿ ಟನ್ ಕಬ್ಬಿಗೆ 4,500 ರೂ ನಿಗದಿ ಮಾಡಬೇಕು. ಇಲ್ಲದಿದ್ದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ರೈತ ಸಂಘದ ನಾಯಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧ್ಯಕ್ಷ ಕೆಂಪೂಗೌಡ, ಪ್ರಸನ್ನ ಎನ್.ಗೌಡ, ಲಿಂಗಪ್ಪಾಜಿ, ಶಿವಳ್ಳಿ ಚಂದ್ರು, ಜಿ.ಕೆ.ರಾಮಕೃಷ್ಣ. ಕನ್ನಲಿ ಕೃಷ್ಣಪ್ಪ, ರವಿ, ತಗ್ಗಹಳ್ಳಿ ಪ್ರಸನ್ನ, ವಿಜಿಕುಮಾರ್, ಬಾಲಚಂದ್ರು, ವಿನೋದ್, ಬಾಲಕೃಷ್ಣ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 11 =
Remember me
