ಬೆಂಗಳೂರು:ರಾಜ್ಯದಲ್ಲಿರುವ ಎಲ್ಲಾ ಕಾರಗೃಹಗಳಲ್ಲಿ ದುಡಿಯುತ್ತಿರುವ, ಕೈದಿಗಳಿಗೆ, ರಾಜ್ಯ ಸರಕಾರ ನಿಗದಿ ಪಡಿಸಿರುವ ಕನಿಷ್ಠ ಕೂಲಿ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.
ಸಚಿವರು, ಇತ್ತೀಚೆಗೆ ರಚನೆಯಾದ ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಈ ಬಗ್ಗೆ, ರಾಜ್ಯ ಹಣಕಾಸು ಇಲಾಖೆಗೆ ಪ್ರಸ್ತಾವನೆ ನೀಡಿದ್ದು, ಕೈದಿಗಳು ತಾವು ಮಾಡಿದ ದುಡಿಮೆಗೆ ರಾಜ್ಯ ಸರಕಾರ ಇತ್ತೀಚೆಗೆ ಪರಾಮರ್ಶಿಸಿ ನಿಗದಿ ಪಡಿಸಿದ ಕನಿಷ್ಠ ಕೂಲಿ ದರವನ್ನು, ನೀಡಲು ನಿರ್ಧರಿಸಲಾಗಿದೆ ಎಂದರು.
ರಾಜ್ಯ ಹಣಕಾಸು ಇಲಾಖೆ, ಇದಕ್ಕಾಗಿ, ಏಳು ಕೋಟಿ ರೂಪಾಯಿಗಳ, ವಿಶೇಷ ಅನುದಾನ ಬಿಡುಗಡೆ ಪ್ರಕ್ರಿಯೆ ನಡೆಸಿದೆ ಎಂದು ಸಚಿವರು ತಿಳಿಸಿದರು.
ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆ ನಡೆದ ಬಗ್ಗೆ ಪ್ರಸ್ತಾಪಿಸಿದ ಸಚಿವರು, ರಾಜ್ಯದ ವಿವಿಧ ಇಲಾಖೆಗಳು, ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಆರ್ಥಿಕ ಚಟುವಟಿಕೆ ಗಳಲ್ಲಿ ಕಾರಾಗೃಹ ಕೈದಿಗಳ ಮಾನವ ಸಂಪನ್ಮೂಲವನ್ನು ಬಳಸಿಕೊಳ್ಳಲು ಅನುವಾಗುವಂತೆ ಯೋಜನೆಗಳನ್ನು ಸಲ್ಲಿಸಲು ಕೋರಲಾಯಿತು.
ಕೇಂದ್ರ ಕಾರಾಗೃಹ ಗಳಲ್ಲಿ, ಬಂಧಿಯಾಗಿರುವ, ಮಾನವ ಸಂಪನ್ಮೂಲವನ್ನು, ರಾಷ್ಟ್ರೀಯ ಸಂಪನ್ಮೂಲ ವನ್ನಾಗಿ ಪರಿವರ್ತಿಸಲು, ಹಾಗೂ, ಈಗಾಗಲೇ ನಡೆಸಲಾಗುತ್ತಿರುವ ಹತ್ತು ಹಲವು, ಕೈಗರಿಕಾ ಚಟುವಟಿಕೆಗಳಿಗೆ ಕಾರ್ಪೊರೇಟ್ ಸ್ವರೂಪವನ್ನು ನೀಡುವ ಪ್ರಯತ್ನ ಇದಾಗಿದೆ ಎಂದು ಸಚಿವರು ಹೇಳಿದರು.
ಕಾರಾಗೃಹಗಳಲ್ಲಿ ಪ್ರಸ್ತುತ ನೇಯ್ಗೆ, ಮರಗೆಲಸ, ಬೇಕರಿ, ಜಮಖಾನ, ಶಾಮಿಯಾನ, ಸೋಪ್ ಹಾಗೂ ಇನ್ನಿತರ ಕೈಗಾರಿಕ ಚಟುವಟಿಕೆಗಳು ನಡೆಯುತ್ತಿದ್ದು ಹಾಲಿ ಇರುವ ಯಂತ್ರೋಪಕರಣಗಳ ಉನ್ನತೀಕರಣ ಕೈದಿಗಳಿಗೆ ವೃತ್ತಿಯಲ್ಲಿ ನೈಪುಣ್ಯತೆ ಒಳಗೊಂಡಂತೆ ಹಲವಾರು ಸುಧಾರಣಾ ಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆಯೂ ಫಲಪ್ರದ ಚರ್ಚೆಯಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯ ಕಾರಾಗೃಹಗಳ ಡಿಜಿ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್, ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ ಇಲಾಖೆ) ರಜನೀಶ್ ಗೋಯಲ್ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
12ಕ್ಕೂ ಹೆಚ್ಚು ದೇಶಗಳು ಎದುರಿಸುತ್ತಿವೆ ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾ ಸ್ಥಿತಿ ಈ ರಾಷ್ಟ್ರಗಳಿಗೂ ಬರಲಿದೆಯೇ? ಇಲ್ಲಿದೆ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 18 =
Remember me
