ಬೆಂಗಳೂರು:ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸಲು ಮುಂದಾಗಿದೆ.
ಈ ಸಂಬಂಧ ಗುರುವಾರ ಗರ್ಭಾವಸ್ಥೆ ಹಾಗೂ ಪ್ರಸವ ಪೂರ್ವ ಲಿಂಗ ಪತ್ತೆ (ಪಿಸಿ ಆ್ಯಂಡ್ ಪಿಎನ್‌ಡಿಟಿ )ಕಾಯ್ದೆ ಅಡಿ ರಚಿಸಲಾಗಿರುವ ಮೇಲ್ವಿಚಾರಣಾ ಸಮಿತಿಯೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭ್ರೂಣ ಹತ್ಯೆ ವಿಚಾರದಲ್ಲಿ ಜಾಗೃತಿಯ ಜೊತೆಗೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೇಲ್ವಿಚಾರಣಾ ಸಮಿತಿಯ ಮೊದಲ ಸಭೆ ನಡೆಸಲಾಗಿದ್ದು, ನಾಲ್ವರು ಶಾಸಕಿಯರು ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಮಿತಿಯ ಸದಸ್ಯರಾಗಿದ್ದಾರೆ. ಭ್ರೂಣ ಹತ್ಯೆ ತಡೆ ನಿಟ್ಟಿನಲ್ಲಿ ಶಾಸಕಿಯರಾದ ರೂಪಕಲಾ, ನಯನಾ ಮೊಟಮ್ಮ, ಲತಾ ಮಲ್ಲಿಕಾರ್ಜುನ್ ಅವರು ತಮ್ಮ ಸಲಹೆಗಳನ್ನ ನೀಡಿದ್ದಾರೆ. ಪ್ರತಿ ಹಂತದಲ್ಲಿ ಮೇಲ್ವಿಚಾರಣೆ ನಡೆಸುವುದರ ಜೊತೆಗೆ, ಹೆಣ್ಣು ಮಕ್ಕಳು ಸಮಾಜಕ್ಕೆ ಎಷ್ಟು ಮುಖ್ಯ ಎಂಬುದರ ಬಗ್ಗೆ ದೊಡ್ಡ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಟಾಸ್ಕ್ ಫೋರ್ಸ್ ರಚನೆ:ಭ್ರೂಣ ಹತ್ಯೆಗಳ ತಡೆಗೆ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ರಾಜ್ಯಮಟ್ಟದ ಟಾಸ್ಕ್ ಫೋರ್ಸ್ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲಾಗುವುದು. ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ ಪಿಸಿ ಆ್ಯಂಡ್ ಪಿಎನ್‌ಡಿಟಿ ಕಾಯ್ದೆ ಅಡಿ ಕಾರ್ಯನಿರ್ವಹಿಸಲಿದ್ದಾರೆ. ಅಲ್ಲದೇ ಆರೋಗ್ಯ ಇಲಾಖೆಯ ಸಕ್ಷಮ ಪ್ರಾಧಿಕಾರಕ್ಕೆ ಪ್ರತ್ಯೇಕವಾಗಿ ಎಸಿಪಿ ಮಟ್ಟದ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸಬ್ಇನ್ಸ್‌ಪೆಕ್ಟರ್ ನಿಯೋಜಿಸುವಂತೆ ಗೃಹ ಇಲಾಖೆಗೆ ಪತ್ರ ಬರೆಯಲಾಗುವುದು. ಇದರಿಂದ ಭ್ರೂಣ ಹತ್ಯೆ ಪ್ರಕರಣಗಳನ್ನ ಟ್ರೇಸ್ ಮಾಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ದಂಡದ ಪ್ರಮಾಣ ಹೆಚ್ಚಳಕ್ಕೆ ಚಿಂತನೆ:ಭ್ರೂಣ ಹತ್ಯೆ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮಗಳು ಆಗಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಈಗಿರುವ ಕಾಯ್ದೆಯಲ್ಲಿ 10 ಸಾವಿರ ದಂಡ, 3 ವರ್ಷ ಜೈಲು ಶಿಕ್ಷೆ ಇದೆ. 5 ಲಕ್ಷದ ವರೆಗೆ ದಂಡ ವಿಧಿಸಿ, 5 ವರ್ಷ ಜೈಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಚಿಂತನೆ ನಡೆಸಲಾಗಿದೆ. ನಾನ್ ಬೇಲಬಲ್ ಕೇಸ್ ಸೇರಿ ಇತರೆ ಅಂಶಗಳ ಕುರಿತು ಮುಂದಿನ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 9 =
Remember me
