ಬೆಂಗಳೂರು:ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅನ್ಯ ಇಲಾಖೆ ಕೆಲಸ ವಹಿಸುವ ಮುನ್ನ ಗ್ರಾಮೀಣಾಭಿವೃದ್ಧಿ ಇಲಾಖೆ ಗಮನಕ್ಕೆ ತರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕ್ಷೇತ್ರೀಯ ಇಲಾಖೆಗಳು ವಹಿಸಿರುವ ಕಾರ್ಯಗಳನ್ನು ಹಿಂಪಡೆಯುವಂತೆಯೂ ಸೂಚಿಸಲಾಗಿದೆ. ಸ್ವ ಇಲಾಖೆ ಕಾರ್ಯಭಾರ ಒತ್ತಡದಿಂದ ಅನ್ಯ ಇಲಾಖೆ ಕೆಲಸದ ಹೊರೆ ಹೊರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ,ಜಿಪಂ ಸಿಇಒಗಳಿಗೆ ಸೂಚಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ಇಲಾಖೆಗಳು ವಿವಿಧ ಕಾರ್ಯಗಳ ಮೇಲುಸ್ತುವಾರಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗಮನಕ್ಕೆ ತಾರದೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹೆಚ್ಚುವರಿ ಕಾರ್ಯಭಾರ ನೀಡುತ್ತಿರುವುದು ಗಮನಕ್ಕ ಬಂದಿರುತ್ತದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಭಾರತ ಸರ್ಕಾರದ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಕಾನಗೊಳಿಸಲಾಗುತ್ತಿದ್ದು, ಅವುಗಳ ಕಾರ್ಯವೇ ಸಾಕಷ್ಟು ಇರುವುದರಿಂದ ಇವರಿಗೆ ಬೇರೆ ಕ್ಷೇತ್ರೀಯ ಇಲಾಖೆಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸೂಚಿಸುವುದಾಗಲೀ ಅಥವಾ ಮೇಲುಸ್ತುವಾರಿ ನೀಡುವ ಮುನ್ನ ಸರ್ಕಾರದ ಗಮನಕ್ಕ ತರಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯ ಸೂಚಿಸಿದೆ.
ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘವೂ ಸಹ ಈ ಕುರಿತು ಮತ್ತೊಮ್ಮೆ ಸುತ್ತೋಲೆ ಹೊರಡಿಸುವಂತೆ ಕೋರಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 5 =
Remember me
