ಬೆಳ್ತಂಗಡಿ (ದ.ಕ.):ಧರ್ಮಸ್ಥಳದ ಬಸದಿಯಲ್ಲಿರುವ ಮೂಲಸ್ವಾಮಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಮತ್ತು ಮುಖ್ಯ ಆರಾಧ್ಯ ದೇವರಾದ ಶ್ರೀ ಮಂಜುನಾಥಸ್ವಾಮಿ ಶಾಂತಿ, ತಾಳ್ಮೆಯ ಸಾಕಾರಮೂರ್ತಿಗಳಾಗಿದ್ದು, ಸತ್ಯ, ಧರ್ಮ,
ನ್ಯಾಯ, ನೀತಿ ನೆಲೆ ನಿಂತ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳ. ಶ್ರದ್ಧಾಭಕ್ತಿಯಿಂದ ಇಲ್ಲಿಗೆ ಬರುವ ಎಲ್ಲ ಭಕ್ತರಿಗೂ ಶಾಂತಿ, ನೆಮ್ಮದಿ, ತಾಳ್ಮೆ ಇರುತ್ತದೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಧರ್ಮಸ್ಥಳಕ್ಕೆ ಭಾನುವಾರ ಧರ್ಮಸಂರಕ್ಷಣ ರಥಗಳು ಮೆರವಣಿಗೆಯಲ್ಲಿ ಆಗಮಿಸಿದಾಗ ಹಾಗೂ ಉಜಿರೆಯಿಂದ 50 ಸಾವಿರಕ್ಕೂ ಅಧಿಕ ಭಕ್ತರು ಪಾದಯಾತ್ರೆಯಲ್ಲಿ ಬಂದ ಸಂದರ್ಭ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಂಜುನಾಥಸ್ವಾಮಿ ವಿಷಕಂಠನಾಗಿದ್ದು, ಲೋಕಕಲ್ಯಾಣ ಕ್ಕಾಗಿ ದುಷ್ಟಶಕ್ತಿಗಳನ್ನು ನಾಶ ಮಾಡಿ ಶಿಷ್ಟರನ್ನು ರಕ್ಷಿಸುತ್ತಾನೆ. ಧರ್ಮಸ್ಥಳದ ಭಕ್ತರೇ ಸ್ವಯಂಪ್ರೇರಣೆಯಿಂದ ಕ್ಷೇತ್ರದ ರಕ್ಷಣೆಗಾಗಿ, ಪ್ರತಿಫಲಾಪೇಕ್ಷೆ ಬಯಸದೆ ಮಾಡಿರುವ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಬಲ ಇಚ್ಛಾಶಕ್ತಿ, ನೈತಿಕ ಬಲ, ದೃಢ ಸಂಕಲ್ಪ ಹಾಗೂ ಭಕ್ತರು ಮತ್ತು ಅಭಿಮಾನಿಗಳ ಬೆಂಬಲದಿಂದ ನಮ್ಮ ಸೇವಾಕಾರ್ಯಗಳು ಮುಂದೆ ದುಪ್ಪಟ್ಟಾಗಲಿವೆ. ಭಕ್ತರ ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ ಮತ್ತು ಗೌರವ ವಜ್ರಕವಚವಾಗಿ ರಕ್ಷಣೆ ನೀಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಧರ್ಮದ ರಕ್ಷಣೆಗಾಗಿ ದೃಢಸಂಕಲ್ಪ: ಸಭೆಯ ಆರಂಭದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಅವರು ವೇದಿಕೆ ಮಧ್ಯದಲ್ಲಿರುವ ಧರ್ಮಪೀಠದಲ್ಲಿ ಆಸೀನರಾದರು. ಎಲ್ಲ ಸ್ವಾಮೀಜಿಯವರು ಹಣ್ಣು-ಹಂಪಲು, ತಾಂಬೂಲ, ಕಾಯಿ, ವೀಳ್ಯದೆಲೆ ಇರುವ ಹರಿವಾಣಕ್ಕೆ ಅಭಿಮಂತ್ರಿಸಿದ ಮಂತ್ರಾಕ್ಷತೆ ಹಾಕಿ ಶುಭ ಹಾರೈಸಿದರು. ಬಳಿಕ ಸಂಕಲ್ಪ ಪೀಠದಲ್ಲಿದ್ದ ಹರಿವಾಣವನ್ನು ಡಾ.ಹೆಗ್ಗಡೆಯವರಿಗೆ ಹಸ್ತಾಂತರಿಸಲಾಯಿತು. ಸೇರಿದ ಸಭಾಸದರೆಲ್ಲರೂ ನಾವು ಸದಾ ಧರ್ಮದ ರಕ್ಷಣೆಗಾಗಿ, ಧರ್ಮಸ್ಥಳದ ರಕ್ಷಣೆಗೆ ನಿಮ್ಮೊಂದಿಗಿದ್ದೇವೆ ಎಂದು ದೃಢಸಂಕಲ್ಪ ಮಾಡಿದರು.
ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ, ಉಡುಪಿ ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಗುರುಪುರ ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ, ಪಲಿಮಾರು ಶ್ರೀ ವಿದ್ಯಾಧೀಶ ಸ್ವಾಮೀಜಿ ಮೊದಲಾದ 15 ಮಠಾಧೀಶಗಳು ಭಾಗವಹಿಸಿದ್ದರು. ಶಾಸಕ ಹರೀಶ್ ಪೂಂಜ ಇದ್ದರು.
ದೇವರ ಅನುಗ್ರಹ, ಅಭಯ:ಒಂದು ದೇಶ ಹಾಳು ಮಾಡಬೇಕಾದರೆ ಅಲ್ಲಿನ ಧರ್ಮ, ಸಂಸ್ಕೃತಿಗೆ ಹಾನಿ ಮಾಡಬೇಕಂತೆ. ಹಾಗೆ ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿಗಳೊಂದಿಗೆ ಅಪಪ್ರಚಾರ ಮಾಡಲಾಗಿದೆ. ಕಾನೂನಿನ ಚೌಕಟ್ಟಿನೊಳಗೆ ಯಾವುದೇ ತನಿಖೆಗೂ ನಾನು ಸಿದ್ಧ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ತಮ್ಮ ಮನ, ವಚನ, ಕಾಯ ಪವಿತ್ರವಾಗಿದೆ. ನಮ್ಮಲ್ಲಿ ಯಾವುದೇ ಸಂಶಯ, ಗೊಂದಲವಿಲ್ಲ. ಮಂಜುನಾಥಸ್ವಾಮಿ, ಅಣ್ಣಪ್ಪಸ್ವಾಮಿ ಹಾಗೂ ಧರ್ಮದೇವತೆಗಳ ಸನ್ನಿಧಿಯಲ್ಲಿ ಪ್ರತಿ ತಿಂಗಳೂ ಸಂಕ್ರಾಂತಿಯಂದು ನಾನು ವರದಿ ಒಪ್ಪಿಸಬೇಕು. ನಾನು ಮಾಡುವ ಎಲ್ಲ ಸೇವಾಕಾರ್ಯಗಳಿಗೂ ಅವರ ಅಭಯ, ಅನುಗ್ರಹ ಇದೆ ಎಂದು ಹೇಳಿದರು.
ವಾರಕ್ಕೆ 55 ಗಂಟೆ ಅಥವಾ ಅದಕ್ಕೂ ಹೆಚ್ಚು ಕೆಲಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ: ಅಧ್ಯಯನದ ವಿವರ ಇಲ್ಲಿದೆ..

ಎರಡು ರೈಲುಗಳ ಮಧ್ಯೆ ಅಪಘಾತ: 8 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:9 − one =
Remember me
