ಉಡುಪಿ:ಪೇಜಾವರ ಮಠದ ವಿಶ್ವಪ್ರಸನ್ನ‌ ತೀರ್ಥ ಸ್ವಾಮೀಜಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರಿಗೆ ಪತ್ರ ಬರೆದಿದ್ದಾರೆ. ಹಿಂದೂ ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅವರು ಪತ್ರ ಬರೆದಿದ್ದಾರೆ.
ಇತ್ತಿಚೆಗೆ ಆಂಧ್ರ ಪ್ರದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಸಾಕಷ್ಟು ದಾಳಿಯಾಗುತ್ತಿದೆ. ಆದರೆ ಆಂಧ್ರಪ್ರದೇಶದ ಸರ್ಕಾರ ಅದನ್ನು ತಡೆಯುವಲ್ಲಿ ವಿಫಲವಾಗಿದೆ. ಉದ್ದೇಶ ಪೂರ್ವಕವಾಗಿಯೇ ಆಂಧ್ರ ಸರ್ಕಾರ ದೌರ್ಜನ್ಯವನ್ನು ತಡೆಯುತ್ತಿಲ್ಲ ಎಂದು ಶ್ರೀಗಳು ಪತ್ರದಲ್ಲಿ ಆರೋಪಿಸಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ಕೋರಲಾಗಿದೆ.
ರಾಮ ತೀರ್ಥ ದೇವಸ್ಥಾನಕ್ಕೆ ಸ್ವಾಮೀಜಿ ಭೇಟಿ ಕೊಟ್ಟ ನಂತರ ಅಮಿತ್ ಷಾಗೆ ಪತ್ರ ಬರೆಯಲಾಗಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 19 =
Remember me
