
ಬೆಂಗಳೂರು:ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ. ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಎಂದು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೆಕ್ಷನ್‌ಗಳ ಸಮೇತ ತಿರುಗೇಟು ನೀಡಿದ್ದಾರೆ.ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸೆಕ್ಷನ್‌ಗಳ ಮಾಹಿತಿಯುಳ್ಳ ಎಸ್‌ಐಟಿ ಪತ್ರಿಕಾ ಹೇಳಿಕೆಯನ್ನು ಟ್ಯಾಗ್ ಮಾಡಿ ಸಿಎಂ ಕಾಲೆಳೆದಿದ್ದಾರೆ.ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಮುಖ್ಯಮಂತ್ರಿ ಕುರ್ಚಿ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ಅನುಮಾನ ಬಂದಿದೆ. ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ಎಂದಿದ್ದಾರೆ.
ವಕೀಲಿಕೆ ಮಾಡಬೇಡಿ:ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು! ಪ್ರ(ಕು)ಖ್ಯಾತ ಮಾಜಿ ವಕೀಲರು! ಆದರೂ ನಿಮ್ಮ ಪ್ರಶ್ನೆಗೆ ಉತ್ತರ ಕೊಡುವುದು ನನ್ನ ಧರ್ಮ. ಆದರೆ, ನಿಮಗೆ ಈ ಪರಿ ಅಜ್ಞಾನವೇ ಎನ್ನುವುದು ನನಗೆ ಸೋಜಿಗ. ಮಾತೆತ್ತಿದರೆ, ’ನಾನು ಲಾಯರ್ ಗಿರಿ ಮಾಡ್ತಾ ಇದ್ದೆ. ಸುಮ್ಕೆ ಕೂತ್ಕಳಿ’ ಎಂದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ನೀವು, ಈಗ ನೀವೇ ಬಾಯಿ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಲೇವಡಿ ಮಾಡಿದ್ದಾರೆ. ಕಾನೂನಿನ ಬಗ್ಗೆ ಸಾಸಿವೆ ಕಾಳಿನಷ್ಟು ತಿಳಿವಳಿಕೆ ಇಲ್ಲದವರೊಬ್ಬರು ನಾನೂ ವಕೀಲಿಕೆ ಮಾಡ್ತಾ ಇದ್ದೆ’ ಎಂದು ಹೇಳಿಕೊಳ್ಳುವುದು ಗೌರವಾನ್ವಿತ ವಕೀಲ ಸಮುದಾಯಕ್ಕೆ ಮಾಡುವ ಅಪಚಾರ ಎಂದಿದ್ದಾರೆ.
ಎಸ್‌ಐಟಿ ರೂಲ್ಸ್ ಗೊತ್ತಿಲ್ಲವೇ?ನೊಂದ ಮಹಿಳೆಯರ ವಿಡಿಯೋಗಳನ್ನು ಹಂಚುವುದು ಅಪರಾಧ ಎಂದು ಯಾವ ಸೆಕ್ಷನ್‌ನಲ್ಲಿ ಹೇಳಿದ್ದಾರೆ ಎಂದು ಒಂದನೇ ಕ್ಲಾಸು ಮಗುವಿನಂತೆ ಕೇಳಿದ್ದೀರಿ. ನೀವೇ ಆದೇಶಿಸಿ ರಚನೆ ಮಾಡಿಸಿರುವ ವಿಶೇಷ ತನಿಖಾ ತಂಡ (ಖಐ) ಹೊರಡಿಸಿರುವ ಪತ್ರಿಕಾ ಪ್ರಕಟಣೆ, ರೂಪಿಸಿರುವ ಕಾನೂನುಬದ್ಧ ನಿಯಮಗಳು ’ಸಾಕ್ಷಾತ್ ಸಿಎಂ’ ಆಗಿರುವ ನಿಮ್ಮ ಗಮನಕ್ಕೇ ಬಂದಿಲ್ಲವೆಂದರೆ,ತಾವು ಸರಕಾರ ನಡೆಸುತ್ತಿರುವಿರೋ ಅಥವಾ ವಿಧಾನಸೌಧವನ್ನು ಟೈಮ್ ಪಾಸ್ ಕ್ಲಬ್ ಮಾಡಿಕೊಂಡಿರುವಿರೋ..? ಎಂದು ಕಿಡಿಕಾರಿದ್ದಾರೆ.
ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್:ನಿಮ್ಮನ್ನು ಅಪಮಾನಿಸುತ್ತಿದ್ದೇನೆ ಎಂದು ಅನ್ಯತಾ ಭಾವಿಸಬೇಡಿ. ವಯಸ್ಸಿನಲ್ಲಿ ಹಿರಿಯರು, ಹೆಚ್ಚು ಅನುಭಸ್ಥರು ನೀವು. ಆದರೆ, ಈ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪ್ರಶ್ನಾರ್ಹ. ಅಮಾಯಕ ಹೆಣ್ಮಕ್ಕಳ ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್ ಅನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾತನಾಡುತ್ತಿದ್ದೀರಿ. ಸಂವಿಧಾನಬದ್ಧವಾಗಿ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿ ಸಂವಿಧಾನ ದ್ರೋಹಿ ಕೃತ್ಯ ಎಸಗಿರುವ ವ್ಯಕ್ತಿ ನಿಮ್ಮ ಸಂಪುಟದಲ್ಲಿ ಉಪ ಮುಖ್ಯಮಂತ್ರಿ! ಇದಕ್ಕಿಂತ ನಿರ್ಲಜ್ಜತೆ ಉಂಟೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನೀವು, ನಿಮ್ಮ ಇಡೀ ಕಾಂಗ್ರೆಸ್ ಪಕ್ಷ ಇಈ ಶಿವು ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದೀರಿ. ನಿಮ್ಮ ಇಡೀ ಕ್ಯಾಬಿನೆಟ್ ಆ ವ್ಯಕ್ತಿಯ ಹಿತಾಸಕ್ತಿಗಾಗಿ, ಆತ ರೂಪಿಸಿರುವ ಒಳಸಂಚಿನಲ್ಲಿ ಭಾಗಿಯಾಗಿದೆ. ನಿಮ್ಮದು ಇಅಆಐಘೆಉ ಊ ಓಅ್ಕಘೆಅಅಓಅ (ಕ್ಯಾಬಿನೆಟ್ ಆ್ ಕರ್ನಾಟಕ) ಅಲ್ಲ, ಅದು ಇಅಆಐಘೆಉ ಊ ಇಘೆಖಐ್ಕಅಇ್ಗ!! (ಕ್ಯಾಬಿನೆಟ್‌ಆ್ ಕಾನ್ಸಿಪ್ರಸಿ) ಎಂದು ಎಚ್ಡಿಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − 14 =
Remember me
