ಹಾಸನ:ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪ ಪ್ರಕರಣಕ್ಕೆ ಸಂಂಧಿಸಿದಂತೆ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್​ ಆದೇಶ ನೀಡಿದೆ. ಇಂದು(ಜೂ.01) ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಹಾಜರುಪಡಿಸಿದ್ದರು.
ಇದನ್ನೂ ಓದಿ:ಬಿಳಿಗಿರಿರಂಗನ ಬೆಟ್ಟದಲ್ಲಿ ತಪ್ಪಿದ ದೊಡ್ಡ ದುರಂತ: ಖಾಸಗಿ ಬಸ್ ಪಲ್ಟಿಯಾಗಿ 49 ಪ್ರಯಾಣಿಕರಿಗೆ ಗಾಯ
ಇದೇ ಮೇ.30 ರಂದು ಅಶ್ಲೀಲ ಪೆನ್​ಡ್ರೈವ್ ಹಂಚಿಕೆ ಪ್ರಕರಣದ ಇಬ್ಬರು ಆರೋಪಿಗಳಾದ ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಗೌಡ ಹಾಗೂ ಪ್ರೀತಂಗೌಡ ಕಚೇರಿ ಸಹಾಯಕ ಯಲಗುಂದ ಚೇತನ್ ಅವರಿಗೆ ವಾರಕ್ಕೆ ಕೆಲವು ಷರತ್ತುಗಳನ್ನು ವಿಧಿಸಿ ಹಾಸನ ಜೈಲಿನಿಂದ ಬಿಡುಗಡೆ ಮಾಡಿ ಹಾಸನದ 3 ನೇ ಅದಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಮಾಡಿತ್ತು.
ಇದೇ ಮೇ.12 ರಂದು ಎಸ್​ಐಟಿ ಪೊಲೀಸರು ಇಬ್ಬರನ್ನು ಬಂದಿಸಿದ್ದರು. ಇದೀಗ 18 ದಿನಗಳ ಬಳಿಕ ಕೇಸ್​ನ ಆರು ಮತ್ತು ಏಳನೇ ಆರೋಪಿಗಳು ಬಿಡುಗಡೆಯಾಗಿದ್ದಾರೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣವು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ.
L.S. Polls | ಅಂತಿಮ ಹಂತದ ಮತದಾನದ ವೇಳೆ ಹಿಂಸಾಚಾರ: ಇವಿಎಂ ಕೊಳಕ್ಕೆ ಎಸೆದು ದುಷ್ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
