ಬೆಂಗಳೂರು:ರಾಜಧಾನಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟಿಸ್​ ನೀಡಿ ದಂಡ ವಿಧಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​, ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದರು. ಆಯಾ ವಲಯ ವ್ಯಾಪ್ತಿಯ ಖಾಲಿ ನಿವೇಶನ ಪಟ್ಟಿ ಮಾಡಿ ಸ್ವಚ್ಛತೆ ಕಾಪಾಡದ ಮಾಲೀಕರಿಗೆ ನೋಟಿಸ್​ ಜಾರಿಗೊಳಿಸಿ ದಂಡ ವಿಧಿಸಿ ಮತ್ತೆ ಮರುಕಳಿಸದಂತೆ ಎಚ್ಚರಿಕೆ ನೀಡಬೇಕು. ಇವುಗಳು ಆಸ್ತಿ ತೆರಿಗೆ ವ್ಯಾಪ್ತಿಗೆ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ತೆರಿಗೆ ವ್ಯಾಪ್ತಿಗೆ ಬರದಿದ್ದಲ್ಲಿ ಕೂಡಲೇ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಆಯಾ ವಲಯ ವ್ಯಾಪ್ತಿಯಲ್ಲಿರುವ ಮುದ್ರಣಾಲಯಗಳಿಗೆ ನೋಟಿಸ್​ ನೀಡಲಾಗುವುದು. ಜಾಹೀರಾತು, ಪರಿಸರ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಮಾಡದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಉಲ್ಲಂಘಣೆ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಹೊಸದಾಗಿ ಕೈಗೆತ್ತಿಕೊಳ್ಳುತ್ತಿರುವ ವೈಟ್​ಟಾಪಿಂಗ್​ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಸಂಚಾರಿ ಪೊಲೀಸ್​ ಅಧಿಕಾರಿಗಳ ಸಹಯೋಗದೊಂದಿಗೆ ಕಾಮಗಾರಿಗಳ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ತುಷಾರ್​ ಗಿರಿನಾಥ್​ ತಾಕೀತು ಮಾಡಿದರು.
ಸರ್ಕಾರಿ ವೈದ್ಯ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್​ ವಿಭಾಗವಿಶೇಷ ಆಯುಕ್ತರಾದ ಮುನೀಶ್​ ಮೌದ್ಗಿಲ್​, ಡಾ.ಕೆ.ಹರೀಶ್​ ಕುಮಾರ್​, ಸುರಳ್ಕರ್​ ವಿಕಾಸ್​ ಕಿಶೋರ್​, ಶಿವಾನಂದ್​ ಕಲ್ಕೆರೆ, ಅವಿನಾಶ್​ ಮೆನನ್​ ರಾಜೇಂದ್ರನ್​, ವಲಯ ಆಯುಕ್ತರಾದ ರಮೇಶ್​, ಶಿವಾನಂದ್​ ಕಪಾಶಿ, ಕರೀಗೌಡ, ರಮ್ಯಾ, ವಿನೋತ್​ ಪ್ರಿಯಾ, ಪ್ರೀತಿ ಗೆಹ್ಲೋಟ್​, ಪ್ರಧಾನ ಅಭಿಯಂತರರು, ವಲಯ ಮುಖ್ಯ ಅಭಿಯಂತರರು ಸೇರಿ ಮತ್ತಿತರರಿದ್ದರು.
ಬೀದಿದೀಪ ನಿರ್ವಹಣೆ ಸರಿಯಾಗಿರಲಿಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಬೀದಿದೀಪಗಳ ನಿರ್ವಹಣೆ ಮಾಡಬೇಕು. ವಿದ್ಯುತ್​ ವಿಭಾಗದಲ್ಲಿ ಕಾರ್ಯನಿರ್ವಹಿಸುವವರಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 2, ಸಂಜೆ 5ರಿಂದ ರಾತ್ರಿ 8.30 ಗಂಟೆ ವರೆಗೆ ಕಾರ್ಯನಿರ್ವಹಿಸಬೇಕಿದೆ. ಹಾಗಾಗಿ, ವಿದ್ಯುತ್​ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು. ನಾಗರಿಕರ ದೂರುಗಳನ್ನು ಕೂಡಲೆ ಸ್ಪಂದಿಸಿ ಬಗೆಹರಿಸಬೇಕು. ಬೀದಿದೀಪ ಇಲ್ಲದಿರುವ ಪ್ರದೇಶಗಳಲ್ಲಿ ಬೀದಿದೀಪ ಅಳವಡಿಸಬೇಕು ಎಂದು ಹೇಳಿದ ತುಷಾರ್​ ಗಿರಿನಾಥ್​, ಪ್ರತಿನಿತ್ಯ ಸರಾಸರಿ 160ರಿಂದ 170 ಡೆಂಘೆ ಪ್ರಕರಣಗಳು ಕಂಡುಬರುತ್ತಿವೆ. ಡೆಂಘೆ ಕುರಿತು ಪರೀಕ್ಷಾ ಪ್ರಮಾಣ ಹೆಚ್ಚಿಸಲಾಗಿದೆ. 600 ಫಾಗಿಂಗ್​ ಯಂತ್ರ ಹಾಗೂ 618 ಸೆಯರ್​ಗಳ ಮೂಲಕ ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸಲಾಗುತ್ತಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
