ಬೆಂಗಳೂರು:ಕರೊನಾ ಉಪಕರಣಗಳ ಖರೀದಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಪೆನ್​ ಡ್ರೈವ್ ತಮ್ಮ ಬಳಿ ಇಲ್ಲ ಎಂದು ಬೀಳಗಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಜೂನ್ 28ರಂದು ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ನಿರಾಣಿಯವರು ದಾಖಲೆ ಇರುವ ಕುರಿತು ಮಾತನಾಡಿದ್ದು, ಅವರ ಮಾತನ್ನು ಸಭೆಯ ವರದಿಗಾರರು ದಾಖಲು ಮಾಡಿದ್ದಾರೆ.
ಇದನ್ನೂ ಓದಿ:31ರ ತನಕ ಶಿಕ್ಷಕರಿಗೆ ವರ್ಕ್​ ಫ್ರಂ ಹೋಮ್ ಕೊಡಿ- ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಆದೇಶ
ಆದರೆ, ಕರೊನಾ ಸೋಂಕಿಗೆ ಚಿಕಿತ್ಸೆ ನೀಡಲು ಖರೀದಿ ಮಾಡಿರುವ ವೈದ್ಯಕೀಯ ಸಲಕರಣೆಗಳಲ್ಲಿ ಭ್ರಷ್ಟಾಚಾರ ನಡೆದಿದ್ದು, ಅದಕ್ಕೆ ಸಂಬಂಧಿಸಿದ 125 ಪುಟಗಳ ದಾಖಲೆಗಳ ಪೆನ್​ಡ್ರೖೆವ್ ತಮ್ಮ ಬಳಿ ಇದೆ ಎಂದು ಕೆಲವು ಸಾಮಾಜಿಕ ತಾಣಗಳು, ವೆಬ್​ಪೋರ್ಟಲ್​ಗಳು ಹಾಗೂ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಅಲ್ಲಗಳೆದಿದ್ದಾರೆ.
ವಿಜಯಪುರದಿಂದ ಬರುವಾಗ ನನ್ನೊಂದಿಗೆ ಒಬ್ಬರು ಅಧಿಕಾರಿ ಬಂದಿದ್ದರು, ಸುಮಾರು 125 ಪುಟಗಳ ದಾಖಲೆಗಳನ್ಬು ಪೆನ್​ಡ್ರೖೆವ್​ನಲ್ಲಿ ತಂದಿದ್ದು, ಅದನ್ನು ತಮಗೆ ಕಳುಹಿಸಿಕೊಡುತ್ತೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾದ ಹಾಗೂ ನಿರಾಧಾರ ಸಂಗತಿಯಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಇಂದು ಹೊಸ ಕೋವಿಡ್​ 19 ಪ್ರಕರಣ 2062; ಮರಣ ಪ್ರಮಾಣ 54

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:10 − 2 =
Remember me
