ಮಂಡ್ಯ:ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿ ನಡೆಸಿದ್ದರಿಂದ ಭಯಗೊಂಡ ಸಂಬಂಧಿಕರು ಶವವನ್ನು ಬಿಟ್ಟು ಓಡಿಹೋದ ಪ್ರಸಂಗ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.
ಗ್ರಾಮದ ಧರ್ಮರಾಜ್ ಎಂಬವರು ಮೃತಪಟ್ಟಿದ್ದು, ಪಾರ್ಥಿವ ಶರೀರವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯುವಾಗ ಮಾರ್ಗಮಧ್ಯೆ ಹೆಜ್ಜೇನು ದಾಳಿ ನಡೆಸಿದೆ. ಆಗ ದಾಳಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶವವನ್ನು ಬಿಟ್ಟು ಓಡಿಹೋಗಿದ್ದರು.
ಈ ಸಂದರ್ಭದಲ್ಲಿ 40ಕ್ಕೂ ಹೆಚ್ಚು ಮಂದಿಗೆ ಹೆಜ್ಜೇನು ಕಚ್ಚಿದೆ. ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡವರಿಗೆ ಪಾಂಡವಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಕೆಲವೇ ಕೆಲವು ಮಂದಿ ಸಮ್ಮುಖದಲ್ಲಿ ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದರು.
‘ದೊಡ್ಡ’ದಾದ ಜಾತಿ-ಮೀಸಲಾತಿ ವಿವಾದ, ಐತಿಹಾಸಿಕ ದೇವಸ್ಥಾನದ ಟೆಂಡರೇ ರದ್ದು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + two =
Remember me
