ಬೆಂಗಳೂರು:ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರವನ್ನು ಬ್ಯಾಂಕಾಕ್​ನಿಂದ ಇನ್ನೇನು ಬೆಂಗಳೂರಿಗೆ ವಿಮಾನದ ಮೂಲಕ ಕರೆ ತರಲಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪಂದನಾ ನಿವಾಸದ ಬಳಿ ಜನರು ಜಮಾಯಿಸತೊಡಗಿದ್ದಾರೆ.
ಸ್ಪಂದನಾ ತಂದೆ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರ ಮಲ್ಲೇಶ್ವರದ ಸ್ಪಂದನಾ ನಿವಾಸದ ಎದುರು ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಸಂಬಂಧಿಕರು, ಬಂಧು-ಬಳಗ ಸೇರಿದಂತೆ ಬಹಳಷ್ಟು ಮಂದಿ ಸೇರಲಾರಂಭಿಸಿದ್ದಾರೆ. ಪಾರ್ಥಿವ ಶರೀರವನ್ನು ತರಲು ದೊಡ್ಡಪ್ಪ ಬಿ.ಕೆ.ಹರಿಪ್ರಸಾದ್ ಹಾಗೂ ಮಾವ ಚಿನ್ನೇಗೌಡ ವಿಮಾನನಿಲ್ದಾಣಕ್ಕೆ ತೆರಳಿದ್ದಾರೆ.
ಇದನ್ನೂ ಓದಿ:ತುಂಡಾಗಿ ದೇಹದಿಂದ ದೂರದಲ್ಲಿ ಬಿದ್ದ ಕೈ; ಭೀಕರ ಅಪಘಾತದಲ್ಲಿ ಮೂವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ
ಇತ್ತ ಮನೆ ಬಳಿ ಸಹೋದರ ರಕ್ಷಿತ್ ಪ್ರತಿಯೊಂದೂ ಸಿದ್ಧತೆಯನ್ನು ನೋಡಿಕೊಳ್ಳುತ್ತಿದ್ದು, ಅಂತಿಮ‌ ದರ್ಶನದ ಸಿದ್ಧತೆ ನಡೆದಿದೆ. ಇನ್ನು ಕೆಲವೇ ಸಮಯದಲ್ಲಿ ಸ್ಪಂದನಾ ಪಾರ್ಥಿವ ಶರೀರವನ್ನು ತರಲಿದ್ದು, ಮುಂದಿನ ವಿಧಿ-ವಿಧಾನದ ಕುರಿತು ಆ ಬಳಿಕ ಇನ್ನಷ್ಟು ಮಾಹಿತಿ ಹೊರಬೀಳಲಿದೆ.
ಕಳವಾದ ಮೊಬೈಲ್‌ಫೋನ್ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
