ಬಂಕಾಪುರ (ಹಾವೇರಿ):ಬಂಕಾಪುರ ಪಟ್ಟಣದ ಸೈಯದ್ ಅಲ್ಲಾವುದ್ದೀನ್ ಶಾ ಖಾದ್ರಿ ದರ್ಗಾದ ಬಳಿ ಹಸುಗೂಸುಗಳನ್ನು ತೊಟ್ಟಿಲಲ್ಲಿ ಹಾಕಿ ಬಾವಿಯಲ್ಲಿ ಬಿಟ್ಟು ಹರಕೆ ತೀರಿಸುತ್ತಿರುವ ವಿಚಿತ್ರ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಕ್ಕಳಿಲ್ಲದ ದಂಪತಿ ದರ್ಗಾಕ್ಕೆ ಪೂಜೆ ಸಲ್ಲಿಸಿ ಹರಕೆ ಹೊತ್ತು ಮಕ್ಕಳಾದ ನಂತರ ಮಗುವನ್ನು ತೊಟ್ಟಿಲಲ್ಲಿ ಹಾಕಿ ದರ್ಗಾದ ಬಾವಿಯಲ್ಲಿ ತೂಗುಬಿಟ್ಟು ನೀರು ಮುಟ್ಟಿಸುವ ಮೂಢನಂಬಿಕೆ ಆಚರಣೆ ಮಾಡಲಾಗುತ್ತಿದೆ.
ಸುದ್ದಿ ತಿಳಿಯುತ್ತಲೆ ಉಪವಿಭಾಗಾಧಿಕಾರಿ, ಜಿಲ್ಲಾ ಶಿಶು ಅಭಿವೃದ್ಧಿ ಅಧಿಕಾರಿಗಳ ತಂಡ ಮಂಗಳವಾರ ದರ್ಗಾಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ನೇತೃತ್ವದ ಅಧಿಕಾರಿಗಳ ತಂಡ, ಅಂಜುಮನ್ ಸಂಸ್ಥೆ ಸದಸ್ಯರು ಮತ್ತು ದರ್ಗಾ ಸಮಿತಿಯವರನ್ನು ವಿಚಾರಣೆಗೆ ಒಳಪಡಿಸಿ ಸೂಕ್ತ ಕ್ರಮ ಜರುಗಿಸುವಂತೆ ಪಿಎಸ್‌ಐ ಸಂತೋಷ ಪಾಟೀಲರಿಗೆ ಸೂಚನೆ ನೀಡಿತು.
‘‘ವೈರಲ್ ಆದ ವಿಡಿಯೋದಲ್ಲಿ ಚಿಕ್ಕ ಮಕ್ಕಳನ್ನು ಬಾವಿಯಲ್ಲಿ ಬಿಟ್ಟು ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ಘಟನೆ ಗಮನಿಸಿದ್ದೇವೆ. ಈ ರೀತಿ ಮಾಡುವುದು ಕಾನೂನು ಪ್ರಕಾರ ಅಪರಾಧ. ಈ ಘಟನೆಗೆ ಕಾರಣರಾದ ವ್ಯಕ್ತಿಗಳ ಮೇಲೆ ಇಲಾಖೆ ವತಿಯಿಂದ ಕಾನೂನು ಕ್ರಮ ಜರುಗಿಸಲಾಗುವುದು’’ ಎಂದು ಜಿಲ್ಲಾ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಪರಶುರಾಮ ಶೆಟ್ಟೆಪ್ಪನವರ ತಿಳಿಸಿದರು.
ಕರೊನಾದ ಸಾವಿನ ಕುಣಿಕೆಯಿಂದ ಪಾರು ಮಾಡುತ್ತಿದೆ ಈ ಔಷಧ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 3 =
Remember me
