ಬೆಂಗಳೂರು:ಕೋವಿಡ್ ವಿಷಯದಲ್ಲಿ ಜನರಲ್ಲಿದ್ದ ಅನೇಕ ಗೊಂದಲಗಳಿಗೆ ಸರ್ಕಾರ ಗುರುವಾರ ಉತ್ತರ ನೀಡಿದೆ. ವಿಧಾನಸೌಧದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದ್ದು, ಮಾಸ್ಕ್, ಲಸಿಕೆ, ಖಾಸಗಿ ಆಸ್ಪತ್ರೆ ಚಿಕಿತ್ಸೆ ಸಂಬಂಧ ನಿಲುವನ್ನು ಸ್ಪಷ್ಟಮಾಡಿದೆ. ‘ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ನಿರಾಕರಿಸುವ ಬಗ್ಗೆ ದೂರು ಬಂದಿದೆ. ಇದು ಅಮಾನವೀಯ ನಡೆ. ಇಂತಹ ಪ್ರಕರಣ ಕಂಡುಬಂದರೆ ಕಾನೂನು ಪ್ರಕಾರ ಕಠಿಣ ಕ್ರಮ ವಹಿಸಲಾಗುವುದು’ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.
ಸಭೆ ಬಳಿಕ ಮಾಧ್ಯಮಗಳಿಗೆ ವಿವರಣೆ ನೀಡಿದ ಅವರು, ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸದ್ಯಕ್ಕೆ ದಂಡ ವಿಧಿಸುವ ಪ್ರಸ್ತಾಪ ಇಲ್ಲ. ಪರಿಸ್ಥಿತಿ ನೋಡಿಕೊಂಡು ಮತ್ತೆ ಸಭೆ ನಡೆಸಿ ರ್ಚಚಿಸಲಾಗುವುದು. ಮಾಸ್ಕ್ ವಿಚಾರದಲ್ಲಿ ನಿರ್ಲಕ್ಷ್ಯ ಕಂಡುಬರುತ್ತಿದೆ. ಎಲ್ಲರೂ ಮಾಸ್ಕ್ ಧರಿಸುವುದು ಸೇರಿ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಿಯಂತ್ರಿಸುವ ಪ್ರಸ್ತಾಪ ಸರ್ಕಾರ ಮುಂದೆ ಇಲ್ಲ ಎಂಬ ವಿಚಾರವನ್ನೂ ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಲಸಿಕೆಯನ್ನು ಶೇ.17 ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ತೀವ್ರ ಬೇಸರದ ಸಂಗತಿ. ಉತ್ತಮ ಆರೋಗ್ಯಕ್ಕಾಗಿ ಅರ್ಹರೆಲ್ಲರೂ ಲಸಿಕೆ ಪಡೆಯಬೇಕು ಎಂದು ಹೇಳಿದರು. ಲಸಿಕೆ ಪಡೆದವರಲ್ಲಿ 6-7 ತಿಂಗಳ ನಂತರ ರೋಗ ನಿರೋಧಕ ಶಕ್ತಿ ಕ್ಷೀಣಿಸುವುದರಿಂದ ಮೂರನೇ ಡೋಸ್ ನೀಡಲಾಗುತ್ತಿದೆ. ಮೂರನೇ ಡೋಸ್ ಪಡೆದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಸ್ಪತ್ರೆಗೆ ದಾಖಲಾದರೂ ಸಾವು ಸಂಭವಿಸುವ ಸ್ಥಿತಿ ಸೃಷ್ಟಿಯಾಗುವುದಿಲ್ಲ ಎಂದು ತಿಳಿಸಿದರು.
ಕೋವಿಡ್​ನ ಒಮಿಕ್ರಾನ್ ರೂಪಾಂತರಿ ತಳಿ ಕುರಿತು ತಜ್ಞರು ಪರೀಕ್ಷೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಇದರ ಬಗ್ಗೆ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ. ರಾಜ್ಯ ಮತ್ತು ಕೇಂದ್ರದ ತಜ್ಞರು ಒಮಿಕ್ರಾನ್ ರೂಪಾಂತರಿ ತಳಿ ಬಗ್ಗೆ ವರದಿ ನೀಡುತ್ತಾರೆ. ಅಂತೆಯೆ, ನಿರಂತರ ಪರೀಕ್ಷೆಗಳು ನಡೆಯುತ್ತಿವೆ. ತಜ್ಞರು ನೀಡುವ ವರದಿಗಳ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಸದ್ಯಕ್ಕೆ ಯಾರೂ ಆತಂಕಪಡುವುದು ಬೇಡ.
|ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.7.2 ಇದೆ. ಆದರೆ ಕೆಲ ಜಿಲ್ಲೆಗಳಲ್ಲಿ ರಾಜ್ಯದ ಪಾಸಿಟಿವಿಟಿ ದರಕ್ಕಿಂತ ಹೆಚ್ಚು ದರ ದಾಖಲಾಗಿದೆ. ಧಾರವಾಡದಲ್ಲಿ ಅತಿ ಹೆಚ್ಚು ದಾಖಲಾಗಿದೆ. ರಾಜ್ಯದಲ್ಲಿ ಪ್ರತಿ ದಿನ 30 ಸಾವಿರ ಮಾದರಿಗಳನ್ನು ಕರೊನಾ ಪರೀಕ್ಷೆ ಮಾಡಲಾಗುತ್ತಿದೆ. ಕೇಂದ್ರದ ಮಾರ್ಗಸೂಚಿಯಂತೆ, ರೋಗ ಲಕ್ಷಣ ಇರುವವರಿಗೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ವಿವರಿಸಿದರು. ಕೋರ್ಬಿವ್ಯಾಕ್ಸ್ ಎಂಬ ಹೊಸ ಲಸಿಕೆಯನ್ನು ಹೈದರಾಬಾದ್ ಸಂಸ್ಥೆ ಆವಿಷ್ಕಾರ ಮಾಡಿದ್ದು, ಅದಕ್ಕೆ ಪರವಾನಗಿ ದೊರೆತಿದೆ. ಮೂರನೇ ಡೋಸ್ ಆಗಿ ಕೋರ್ಬಿವ್ಯಾಕ್ಸ್ ಪಡೆಯಲು ಶುಕ್ರವಾರದಿಂದ ಅವಕಾಶವಿದೆ. 60 ವರ್ಷ ವಯಸ್ಸು ಮೇಲ್ಪಟ್ಟವರು, ಕೋ ಮಾರ್ಬಿಡಿಟಿ ಇರುವವರು ಕಡ್ಡಾಯವಾಗಿ 3 ನೇ ಡೋಸ್ ಪಡೆಯಬೇಕು ಎಂದು ಕೋರಿದರು.
ರಾಜ್ಯದಲ್ಲಿ ಕಾಣಿಸಿಲ್ಲ ಮಂಕಿ ಪಾಕ್ಸ್:ದೇಶದಲ್ಲಿ ಈವರೆಗೆ 9 ಮಂಕಿ ಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಆದರೆ ರಾಜ್ಯದಲ್ಲಿ ಈವರೆಗೂ ಪ್ರಕರಣ ಕಂಡುಬಂದಿಲ್ಲ. ಗಡಿ ಭಾಗದ ಐದಾರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಸಾಂಕ್ರಾಮಿಕ ಹೆಚ್ಚಳ:ರಾಜ್ಯದಲ್ಲಿ ಹೆಚ್ಚು ಮಳೆಯಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಕಳೆದ ವರ್ಷ ಇದೇ ಸಮಯದಲ್ಲಿ 419 ಮಲೇರಿಯಾ ಪ್ರಕರಣ ಕಂಡುಬಂದರೆ, ಈ ಬಾರಿ 114 ಕಂಡುಬಂದಿದೆ. ಇದು ಕಡಿಮೆ ಪ್ರಮಾಣದಲ್ಲಿದೆ. ಆದರೆ ಕಳೆದ ವರ್ಷ 1,266 ಡೆಂಘ ಪ್ರಕರಣ ಕಂಡುಬಂದಿದ್ದು, ಈ ವರ್ಷ 4,405 ಆಗಿದೆ. ಹಾಗೆಯೇ, ಈ ಬಾರಿ ಪರೀಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಡೆಂಘ ಪ್ರಕರಣ ಹೆಚ್ಚಿದೆ. ಕಳೆದ ವರ್ಷ ಚಿಕೂನ್​ಗುನ್ಯಾ ಪ್ರಕರಣ 454 ಇದ್ದು, ಈ ಬಾರಿ 978 ಆಗಿದೆ. ಎಚ್1ಎನ್1 ಕಳೆದ ವರ್ಷ 3 ಇದ್ದು, ಈ ಬಾರಿ 345 ಇದೆ ಎಂದು ವಿವರಿಸಿದರು.
ಪರೇಶ ಮೇಸ್ತ ಕೊಲೆ ಆರೋಪಿಗೇ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ!; ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ..

ತಂದೆಯ ಕಣ್ಣೆದುರೇ ವಾಹನದಡಿಗೆ ಸಿಲುಕಿ ಸಾವಿಗೀಡಾದ ಹತ್ತು ವರ್ಷದ ಪುತ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
