ಮೈಸೂರು:ವರುಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಜತೆಗೂಡಿ ಮತಯಾಚನೆಗೆ ತೆರಳಿದ್ದಾಗ ಲಲಿತಾದ್ರಿಪುರದಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಗೊಂದಲ ಸೃಷ್ಟಿ ಬೇಡ, ಚನ್ನಪಟ್ಟಣದಲ್ಲಿ ಸಮರ್ಥ ಅಭ್ಯರ್ಥಿ ಇದ್ದಿದ್ದರೆ ಮಂಡ್ಯದಿಂದ ಸ್ಪರ್ಧಿಸುತ್ತಿದ್ದೆ; ಎಚ್​ಡಿಕೆ
ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ನೀವು ಏನು ಅಭಿವೃದ್ಧಿ ಮಾಡಿದ್ದೀರಿ? ಆವಾಗ ಏನು ಕೊಡುಗೆ ನೀಡಿದ್ದೀರಿ ಎಂದು ಈಗ ಮತ ಕೇಳಲು ಬಂದಿದ್ದೀರಿ? ಎಂದು ವಿ.ಸೋಮಣ್ಣ ಅವರನ್ನು ಪ್ರಶ್ನಿಸುತ್ತಾ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವರುಣ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿ.ಸೋಮಣ್ಣ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಪ್ರಚಾರಕಾರ್ಯದಲ್ಲಿ ತೊಡಗಿದ್ದರು. ಗ್ರಾಮಸ್ಥರು ಬಹಿರಂಗ ಪ್ರಶ್ನೆಗೆ ಉತ್ತರಿಸುವಾಗ ವಿ.ಸೋಮಣ್ಣ ಹಾಗೂ ಪ್ರತಾಪ್ ಸಿಂಹ ತಬ್ಬಿಬ್ಬಾದ ಸನ್ನಿವೇಶವೂ ನಡೆದಿದೆ.
ಇದನ್ನೂ ಓದಿ:ಇತರ ಪಕ್ಷದವರು ಕಾಂಗ್ರೆಸ್​​ಗೆ ಬರುತ್ತಿದ್ದಂತೆ ಕನ್ವರ್ಟ್ ಆಗುತ್ತಾರೆ; ಜಿ.ಪರಮೇಶ್ವರ್
ಸೋಮಣ್ಣಗೆ ಪ್ರಚಾರದ ವೇಳೆ ಮತದಾರರು ತರಾಟೆಗೆ ತೆಗೆದುಕೊಳ್ಳುತ್ತಿರುವ ದೃಶ್ಯವನ್ನು ವಿಡಿಯೋ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರತಾಪ್ ಸಿಂಹ ಹಾಗೂ ಸೋಮಣ್ಣ ತಡೆದಿದ್ದು, ಮೊಬೈಲ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
