ಬೆಂಗಳೂರು:ಜುಲೈನಲ್ಲಿ ರಾಜ್ಯಾದ್ಯಂತ ಕರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಆತಂಕ ಹೊರಹಾಕಿರುವ ನಡುವೆಯೇ ದಿನಕ್ಕೊಂದು ನಿಯಮ ಬದಲಾಯಿಸುವ ಮೂಲಕ ಆರೋಗ್ಯ ಇಲಾಖೆಯೇ ಕರೊನಾ ಸೋಂಕು ಸಮುದಾಯಕ್ಕೆ ಹರಡಲು ಕಾರಣವಾಗುತ್ತಿದೆ ಎಂಬ ಆಕ್ರೋಶ ವ್ಯಕ್ತ ವಾಗಿದೆ. ಕೋವಿಡ್ ವಾರ್ ರೂಂ ಕೊಟ್ಟಿರುವ ವರದಿಗಳನ್ನೂ ಗಂಭೀರವಾಗಿ ಪರಿಗಣಿಸದೆ ಬೇಕಾಬಿಟ್ಟಿ ತೀರ್ಮಾನ ಕೈಗೊಳ್ಳ ಲಾಗುತ್ತಿದೆ ಎಂದು ಆರೋಗ್ಯ ತಜ್ಞರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಇನ್ನಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿರುವ ಸರ್ಕಾರ ಸೋಂಕು ನಿಯಂತ್ರಿಸುವ ನೆಪದಲ್ಲಿ ದಿನಕ್ಕೊಂದು ನಿರ್ಧಾರ ಕೈಗೊಳ್ಳುತ್ತಿದೆ. ಮಹಾರಾಷ್ಟ್ರ ಹಾಗೂ ಹೊರ ದೇಶಗಳಿಂದ ಬರುವ ಪ್ರಯಾಣಿಕರಿಗೆ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಅವಧಿಯನ್ನು 7 ದಿನಕ್ಕೆ ಇಳಿಸಿರುವುದು ಒಂದೆಡೆ ಯಾದರೆ ಮಹಾರಾಷ್ಟ್ರ ಹೊರತುಪಡಿಸಿ ಹೊರ ರಾಜ್ಯಗಳಿಂದ ಬರುವವರಿಗೆ 14 ದಿನ ಸಾಂಸ್ಥಿಕ ಕ್ವಾರಂಟೈನ್ ನಿಯಮವನ್ನು ಮತ್ತೆ ಮಾರ್ಪಾಡು ಗೊಳಿಸಿ ಬರೀ 14 ದಿನ ಹೋಂ ಕ್ವಾರಂಟೈನ್​ಗೆ ಸೂಚಿಸಿರುವುದು ಕೂಡ ಸರಿಯಾದ ನಿರ್ಧಾರವಲ್ಲ ಎಂಬ ಮಾತು ಕೇಳಿಬಂದಿವೆ.
ಹೋಂ ಕ್ವಾರಂಟೈನ್​ಗೂ ಸೂಕ್ತ ಮೇಲ್ವಿಚಾರಣೆ ವ್ಯವಸ್ಥೆ ಮಾಡದಿರುವುದರಿಂದ ಸಾಂಸ್ಥಿಕ ಕ್ವಾರಂಟೈನ್ ಇದ್ದಾಗಲೇ ಅಧಿಕಾರಿಗಳ ಕಣ್ತಪ್ಪಿಸಿ ಮನೆಗೆ ಹೋಗಲು ಯತ್ನಿಸಿದವರು ಹೋಂ ಕ್ವಾರಂಟೈನ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆಯೇ ಎಂಬ ಪ್ರಶ್ನೆಯನ್ನು ಹುಟ್ಟಹಾಕಿದೆ.
ಇದೀಗ ಕೋವಿಡ್ ಪರೀಕ್ಷೆಯಲ್ಲೂ ವಿನಾಯಿತಿ ನೀಡಲಾಗಿದೆ. ರೋಗ ಲಕ್ಷಣ ಹೊಂದಿದವರನ್ನಷ್ಟೇ ಪರೀಕ್ಷೆಗೆ ಒಳಪಡಿಸುವುದಾಗಿ ಹೊಸ ಆದೇಶ ಹೊರಡಿಸಿದೆ. ಅದರಲ್ಲೂ ಅತೀ ಹೆಚ್ಚು ಸೋಂಕಿತ ರಾಜ್ಯ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೂ ಪರೀಕ್ಷೆಯಲ್ಲಿ ವಿನಾಯಿತಿ ನೀಡಲಾಗಿದೆ. ಕರ್ನಾಟಕ ಕೋವಿಡ್ ವಾರ್ ರೂಂ ಕೊಟ್ಟಿರುವ ವರದಿ ಪ್ರಕಾರ ಒಟ್ಟು ಸೋಂಕಿತರಲ್ಲಿ ಶೇ.96 ಮಂದಿ ರೋಗ ಲಕ್ಷಣವನ್ನೇ ಹೊಂದಿಲ್ಲ. ಹೀಗಿರುವಾಗ ವಾರ್ ರೂಂ ವಿಶ್ಲೇಷಣೆ ಕಡೆಗಣಿಸಿ ಕೇವಲ ರೋಗ ಲಕ್ಷಣ ಹೊಂದಿದವರಿಗಷ್ಟೇ ಪರೀಕ್ಷೆ ನಡೆಸಲು ಅದೇಶಿಸಿದೆ. ಇದರಿಂದ ಲಕ್ಷಣ ರಹಿತ ಸೋಂಕಿತರ ಸಂಪರ್ಕಕ್ಕೆ ಬರುವ ಮಕ್ಕಳು, ವೃದ್ಧರು, ಗರ್ಭಿಣಿಯರಲ್ಲಿ ಸೋಂಕು ಹರಡಬಹುದೆಂಬ ಆತಂಕದ ಜತೆಗೆ ಗೊಂದಲವನ್ನೂ ಮೂಡಿಸಿದೆ.
ಯಾವುದು ಸಡಿಲ
| ಪಂಕಜ ಕೆ.ಎಂ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eleven =
Remember me
