ಮೈಸೂರು:ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ಸ್ವಾತಂತ್ರ್ಯ ಬಂದಾಗಿನಿಂದಲೂ ಸ್ಮಶಾನ ನಿರ್ಮಾಣ ಕಾರ್ಯ ನಡೆದೇ ಇಲ್ಲ. ಈ ಹಿನ್ನೆಲೆಯಲ್ಲಿ ಜನರು ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಟಿ. ನರಸೀಪುರ ತಾಲ್ಲೂಕಿನ ನರೀಪುರ ಗ್ರಾಮದಲ್ಲಿ ಗ್ರಾಮಸ್ಥರು, ಶವಸಂಸ್ಕಾರ ನಡೆಸಲು ಸ್ಮಶಾನ ಇಲ್ಲದ ಕಾರಣಕ್ಕಾಗಿ ಪ್ರತಿಭಟನೆ ನಡೆಸಿದ್ದು ಇದು ಸಮಾಜಕಲ್ಯಾಣ ಇಲಾಖೆ ಸಚಿವ ಡಾ ಎಚ್​ಸಿ ಮಹಾದೇವಪ್ಪ ಪ್ರತಿನಿಧಿಸುವ ಕ್ಷೇತ್ರವಾಗಿದೆ.
ಸ್ಮಶಾಣಕ್ಕಾಗಿ ಒತ್ತಾಯಿಸುವ ಗ್ರಾಮಸ್ಥರು ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಸ್ಥರ ಮಾತಿನಲ್ಲೇ ಹೇಳುವುದಾದರೆ, “ದೇಶಕ್ಕೆ ಸ್ವತಂತ್ರ ಬಂದು 75ವರ್ಷ ಕಳೆದಿದೆ. ಇಂದಿಗೂ ಸಹ ಅನೇಕ ಕಡೆ ಮನಷ್ಯರು ಸತ್ತಾಗ ಹೂಳಲು ಸ್ಮಶಾಣವಿಲ್ಲ. ಸ್ಮಶಾಣವಿಲ್ಲದೆ ಎಲ್ಲಿ ಅಂತಿಮ ಸಂಸ್ಕಾರ ಮಾಡಬೇಕೆಂಬುದೇ ತಿಳಿಯುತ್ತಿಲ್ಲ” ಎಂದಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್​ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ಕೊನೆಗೆ ತಮ್ಮ ಸಮಸ್ಯೆಯನ್ನು ಅರ್ಥ ಮಾಡಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್, “ಅಧಿಕಾರಿಗಳನ್ನ ಕರೆದು ಸಭೆ ನಡೆಸುತ್ತೇನೆ. ಎಲ್ಲೆಲ್ಲಿ ಸ್ಮಶಾಣದ ಕೊರತೆ ಇದೆ ಎಂಬ ಮಾಹಿತಿ ಪಡೆಯುತ್ತೇನೆ. ಸ್ಮಶಾಣ ಜಾಗದ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ. ತಹಸೀಲ್ದಾರ್ ಸುರೇಶ್ ಆಚಾರ್ ಭರವಸೆ ಮೇರೆಗೆ ಪ್ರತಿಭಟನೆಯನ್ನು ಗ್ರಾಮಸ್ಥರು ಕೈ ಬಿಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
