ಬೆಂಗಳೂರು:ಅನ್​ಲಾಕ್​-4ರ ಹಂತದಲ್ಲಿ ಮೆಟ್ರೋ, ಸಾರ್ವಜನಿಕ ಉದ್ಯಾನವನಗಳನ್ನು ಮತ್ತೆ ತೆರೆಯಲಾದ ಬೆನ್ನಲ್ಲೇ ಇದೀಗ ಸಾರ್ವಜನಿಕ ಗ್ರಂಥಾಲಯಗಳನ್ನೂ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಕಂಟೇನ್​ಮೆಂಟ್​ ವಲಯಗಳನ್ನು ಹೊರತುಪಡಿಸಿ, ಉಳಿದ ಕಡೆ ಇರುವ ಲೈಬ್ರರಿಗಳನ್ನು ತೆರೆಯಬಹದು.ಕೊವಿಡ್-19 ಸೋಂಕು ನಿಯಂತ್ರಣಾ ಕ್ರಮಗಳನ್ನು ಪಾಲಿಸಬೇಕು. ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್​ ಟೆಸ್ಟ್​ಗೆ ಒಳಪಡಿಸಬೇಕು ಎಂದು ಸರ್ಕಾರದ ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.ಇದನ್ನೂ ಓದಿ:ಕೋವಿಡ್ 19 ರೋಗಿಗಳಿಗೆ ಆ್ಯಂಬುಲೆನ್ಸ್ ಶುಲ್ಕ ನಿಗದಿ ಮಾಡಿ- ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ
ಕರೊನಾ ನಿಮಿತ್ತ ಮಾರ್ಚ್​​ನಿಂದಲೂ ಲೈಬ್ರರಿಗಳು ಬಾಗಿಲು ಮುಚ್ಚಿವೆ. ಕೇಂದ್ರ ಸರ್ಕಾರದ ಗೃಹ ಮಂತ್ರಾಲಯ ಕಂಟೇನ್​ಮೆಂಟ್​ ವಲಯಗಳನ್ನು ಹೊರತುಪಡಿಸಿದ ಸ್ಥಳಗಳಲ್ಲಿ ಹೆಚ್ಚಿನ ಕಾರ್ಯಚಟುವಟಿಕೆಗಳನ್ನು ಪುನರಾರಂಭಿಸಲು ಅನುಮತಿ ನೀಡಿದ್ದು, ಅದರ ಅನ್ವಯ ರಾಜ್ಯ ಸರ್ಕಾರ ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಅನುವು ಮಾಡಿಕೊಡುತ್ತಿದೆ. (ಏಜೆನ್ಸೀಸ್​)
ರಾಗಿಣಿ, ಸಂಜನಾ ಸೇರಿ ಆರೂ ಮಂದಿ ಆರೋಪಿಗಳು ಮತ್ತೆ ಸಿಸಿಬಿ ಕಸ್ಟಡಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 4 =
Remember me
