ಬೆಂಗಳೂರು:ವಾಸಕ್ಕಾಗಿ ಹೊಸ ಅಪಾರ್ಟ್​ಮೆಂಟ್​​ವೊಂದನ್ನು ನೋಡಲು ಹೋದ ವ್ಯಕ್ತಿಯೊಬ್ಬರು ಅಲ್ಲಿಂದಲೇ ಕೆಳಕ್ಕೆ ಹಾರಿ ಇಹಲೋಕವನ್ನೇ ತ್ಯಜಿಸಿದ ದುರಂತ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ವಿವೇಕ್​ ಮಧುಸೂದನ್ ವೈದ್ಯ ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ. ವಿವೇಕ್​ ಕೆಲವು ವರ್ಷಗಳ ಹಿಂದೆ ಪತ್ನಿಯಿಂದ ವಿಚ್ಛೇದಿತರಾಗಿದ್ದರು. ಆ ನಂತರ ಒಂಟಿಯಾಗಿ ಜೀವನ ಸಾಗಿಸುತ್ತಿದ್ದ ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು ಇಂದು ಜಿ ಕಾರ್ಪ್ ಎಂಬ ಅಪಾರ್ಟ್​ಮೆಂಟ್​ ನೋಡಲು ಹೋಗಿದ್ದಾಗ ಈ ಆತ್ಯಹತ್ಯೆ ನಡೆದಿದೆ.
ಇದನ್ನೂ ಓದಿ:ಫಸ್ಟ್ ಡೋಸ್​ ಲಸಿಕೆ ತೆಗೆದುಕೊಳ್ಳುತ್ತಿದ್ದಂತೆ ಫಸ್ಟ್​ ಹೀಗೇನಾದ್ರೂ ಮಾಡ್ಬಿಟ್ಟೀರಾ ಜೋಕೆ..!!!
ಅಪಾರ್ಟ್​ಮೆಂಟ್​ ನೋಡಲು ಹೋಗಿದ್ದ ಇವರು ನಿರ್ಮಾಣ ಹಂತದಲ್ಲಿದ್ದ ಕಟ್ಟಡದ 15ನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿದ್ದ ರಭಸಕ್ಕೆ ತಲೆಯೊಡೆದು ಹೋಗಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರು. ಸ್ಥಳಕ್ಕೆ ವಿವೇಕನಗರ ಪೊಲೀಸರು ಧಾವಿಸಿದ್ದು, ಹೆಚ್ಚಿನ ವಿವರ ಇನ್ನಷ್ಟೇ ಬಹಿರಂಗವಾಗಬೇಕಿದೆ.
ನಟಿ ವಿಜಯಲಕ್ಷ್ಮೀಗೆ ಮತ್ತೊಂದು ಸಂಕಷ್ಟ; ಸಹೋದರಿಗಾಗಿ ಶಿವಣ್ಣನ ಸಹಾಯ ಯಾಚನೆ..

ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 19 =
Remember me
