ಉಡುಪಿ:ಆತನಿಗೆ 65 ವರ್ಷ. ಆದರೆ ಆತ ಈ ಇಳಿವಯಸ್ಸಲ್ಲೂ ಹನ್ನೊಂದು ವರ್ಷದ ಬಾಲಕಿ ಮೇಲೆರಗಿದ್ದಾನೆ. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ಕೊಟ್ಟ ಕಾಮುಕನನ್ನು ಪೊಲೀಸರು ಬಂಧಿಸಿದ್ದು, ಆತನ ಮೇಲೆ ಪೋಕ್ಸೋ ಕೇಸ್ ಜಡಿಯಲಾಗಿದೆ.
ಉಡುಪಿ ಜಿಲ್ಲೆಯ ಅನಂತ ಸೇರಿಗಾರ್ ಎಂಬಾತ ಬಂಧಿತ. ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಬಾಲಕಿಯು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದಾಳೆ. ಈ ಬಗ್ಗೆ ಮಕ್ಕಳ ಸಹಾಯವಾಣಿಯವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಿದರು.
ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.
ಖಾಲಿ ಜಾಗಗಳೇ ಇವರ ಟಾರ್ಗೆಟ್​; 600 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಸಿದ ಭೂಗಳ್ಳರ ಜಾಲ ಭೇದಿಸಿದ ಸಿಐಡಿ

ನಿಮ್ಮಲ್ಲಿ ಈ ಲಕ್ಷಣಗಳಿದ್ದರೆ ತುರ್ತಾಗಿ ಕರೊನಾ ಲಸಿಕೆ ತೆಗೆದುಕೊಳ್ಳುವುದು ಅನಿವಾರ್ಯ..

ಬಾಲಕಿಯರಿಬ್ಬರ ಮೇಲೆ ಗ್ಯಾಂಗ್​ರೇಪ್​: ರಾತ್ರಿ ಇಡೀ ಮಕ್ಕಳು ಹೊರಗಿದ್ದಾಗ ಮನೆಯವರು ಯಾಕೆ ಸುಮ್ಮನಿದ್ದರು ಎಂದ ಸಿಎಂ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
