ಬೆಂಗಳೂರುಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ನೀಟ್ ಎಂಡಿಎಸ್ -2024 ರಲ್ಲಿ ಅರ್ಹರಾಗಿರುವ ಅಭ್ಯರ್ಥಿಗಳಿಂದ 2024-25ನೇ ಸಾಲಿಗೆ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಪಿಜಿಇಟಿ- 2024ಕ್ಕೆ ಜುಲೈ 10ರ ಬೆಳಗ್ಗೆ 11ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಮಾಡಿ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಜು.10ರ ಸಂಜೆ 6ರವರೆಗೆ ಅವಕಾಶವಿರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಕರ್ನಾಟಕೇತರ ಅಭ್ಯರ್ಥಿಗಳಿಗೆ ಯಾವುದೇ ಮೀಸಲಾತಿ ಅನ್ವಯಿಸುವುದಿಲ್ಲ. ಆದ್ದರಿಂದ ನೀಟ್ ಎಂಡಿಎಸ್- 2024ರಲ್ಲಿ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಪಡೆದವರು ಮಾತ್ರ (ಶೇ.50 ಹಾಗೂ ಅದಕ್ಕಿಂತ ಹೆಚ್ದಿನ ಪರ್ಸೆಂಟೈಲ್) ಅರ್ಹತೆ ಹೊಂದಿ ಪ್ರವೇಶಕ್ಕಾಗಿ ನೋಂದಣಿ ಮಾಡಿ ಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಓಬಿಸಿ ಅರ್ಹತಾ ಮಾನದಂಡಗಳು ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ.
ದಾಖಲೆ ಪರಿಶೀಲನೆ:
ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗಾಗಿ ಕೆಇಎ ಪೋರ್ಟಲ್ ಅನ್ನು ಸೋಮವಾರದಿಂದ ತೆರೆಯಲಾಗಿದೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗಾಗಿ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಜು. 9ರಿಂದ 11ರೊಳಗೆ ಹಾಜರಾಗಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
