ಬೆಂಗಳೂರು:ಫೋನ್​ ಟ್ಯಾಪಿಂಗ್​ ಆರೋಪವಲ್ಲ, ಸತ್ಯ. ಕಳೆದ 15 ದಿನಗಳಿಂದ ಕರೆ ದೂರವಾಣಿಯಲ್ಲಿ ಮಾತನಾಡುವಾಗ ಅಡಚಣೆ ಆಗುತ್ತಿದೆ. ಈ ಸಂಬಂಧ ದೂರು ನೀಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್​ ಹೇಳಿದ್ದಾರೆ.
‘ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಆರೋಪಿಸಿದ್ದರು. ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸುರೇಶ್, ಫೋನ್​ ಟ್ಯಾಪಿಂಗ್​ನಲ್ಲಿ ಬಿಜೆಪಿಯವರು ಎಕ್ಸ್​ಪರ್ಟ್​. ಒಂದು ಪಕ್ಷದ ಅಧ್ಯಕ್ಷರು ಇದನ್ನು ಗಂಭೀರವಾಗಿ ಮಾಡಿದ್ದಾರೆ. ರಾಜ್ಯ ಸರ್ಕಾರ ಮೊದಲು ಈ ಪ್ರಕರಣವನ್ನು ಪರಿಗಣಿಸಬೇಕು. ಇಲ್ಲವಾದರೆ ನಾನೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಸಿದರು.
ಇದನ್ನೂ ಓದಿರಿvideo/ ಗರಿಬಿಚ್ಚಿ ಪ್ರಧಾನಿ ಮೋದಿ ಜತೆ ಹೆಜ್ಜೆ ಹಾಕಿದ ನವಿಲು… ಇದು ‘ನಮೋ’ ಅಮೂಲ್ಯ ಕ್ಷಣಗಳು!
‘ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಆರೋಪಿಸಿದ್ದರು. ಈ ಮಾತಿಗೆ ಧ್ವನಿಗೂಡಿಸಿರುವ ಅವರ ಸಹೋದರ ಡಿ.ಕೆ. ಸುರೇಶ್​, ಫೋನ್​ ಟ್ಯಾಪಿಂಗ್​ ಆರೋಪವಲ್ಲ, ಸತ್ಯ ಎಂದಿದ್ದಾರೆ.
ಡಿಜೆ ಹಳ್ಳಿ ಪ್ರಕರಣದಲ್ಲಿ ಗುಪ್ತಚರ ಇಲಾಖೆ ವೈಫಲ್ಯವಿದೆ. ಅದನ್ನ ಸರ್ಕಾರ ಒಪ್ಪಿಕೊಳ್ಳಬೇಕು. ಅದನ್ನು ಬಿಟ್ಟು ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್​ ಮೇಲೆ ಗೂಬೆ ಕೂರಿಸುವ ಕೆಲಸ ನಡೆಯುತ್ತಿದೆ ಎಂದು ಸುರೇಶ್​ ವಾಗ್ದಾಳಿ ನಡೆಸಿದರು.
ಮಿಸ್ಟರ್ ಡಿಕೆಶಿ, ನೀವು ಜಾಮೀನಿನ ಮೇಲೆ ಹೊರಗಿದ್ದೀರಿ ಎಂಬುದನ್ನ ಅರಿತುಕೊಳ್ಳಿ; ಪ್ರಹ್ಲಾದ್ ಜೋಶಿ

https://www.vijayavani.net/dk-shivakumar-has-a-phone-tapping-machine-at-home/
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 + 16 =
Remember me
