ಮೈಸೂರು:ರಾಜ್ಯ ವಿಧಾನಸಭಾ ಚುನಾವಣೆಯ ದಿನ ಸಮೀಪಿಸುತ್ತಿದೆ. ಈಗಾಗಲೇ ಅಂಚೆ ಮತದಾನ ಆರಂಭವಾಗಿದೆ. ಇದೀಗ ಯೋಧರೊಬ್ಬರು ಅಂಚೆ ಮತದಾನದ ಮೂಲಕ ಎಡವಟ್ಟು ಮಾಡಿಕೊಂಡಿದ್ದು, ಚುನಾವಣಾ ಅಧಿಕಾರಿಗಳು ತನಿಖೆ ನಡೆಸುವಂತಾಗಿದೆ.
ಇದನ್ನೂ ಓದಿ:ಬಿಜೆಪಿಯ ಪ್ರಣಾಳಿಕೆ ಓದುವುದು ಸತ್ತ ಮಗನ ಜಾತಕ ಓದುವುದು ಎರಡೂ ಒಂದೇ! ಕಾಂಗ್ರೆಸ್ ಟ್ವೀಟ್
ಯೋಧಯೊರಬ್ಬರು ಮತಪತ್ರದ ಮೂಲಕ ಮತದಾನ ಮಾಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಮತಪತ್ರದ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದು ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ಫೋಟೋದಲ್ಲಿ ಯೋಧ ಸಾ.ರಾ.ಮಹೇಶ್ ಅವರಿಗೆ ಮತ ಹಾಕಿರುವುದು ಸ್ಪಷ್ಟವಾಗಿ ಕಾಣಿಸಿಕೊಂಡಿದೆ.
ಯೋಧ ಮತ ಹಾಕಿರುವ ಫೋಟೋವನ್ನು ಬಳಸಿಕೊಂಡು ಸಾ.ರಾ.ಮಹೇಶ್ ಅಭಿಮಾನಿಗಳು ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದಾರೆ. ನಮ್ಮ ‘ಸಾ.ರಾ.ಬಾಸ್​’ಗೆ ಮೊದಲ ಮತ ನಮ್ಮ ದೇಶ ಕಾಯುವ ಸೈನಿಕನಿಂದ. ಜೈಹಿಂದ್ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:‘ನಾನು ಹೇಳಿದ್ದೂ ಆಯ್ತು… ಅವರು ಉತ್ತರಿಸಿದ್ದೂ ಆಯ್ತು’: ‘ವಿಷಕಂಠ’ ಹೇಳಿಕೆ ವಿವಾದ ತಣ್ಣಗಾಗಿಸುವ ಪ್ರಯತ್ನದಲ್ಲಿ ಖರ್ಗೆ!
ಕೆ.ಆರ್.ನಗರ ಕ್ಷೇತ್ರದ ಮತದಾರನಾಗಿರುವ ಯೋಧ, ಹೊರ ರಾಜ್ಯದಿಂದ ಅಂಚೆ ಮತದಾನ ಮಾಡಿರುವುದು ಸದ್ಯ ಬೆಳಕಿಗೆ ಬಂದಿದೆ. ಸದ್ಯ ಯೋಧ ಎಲ್ಲಿಂದ ಮತದಾನ ಮಾಡಿದ್ದಾರೆ ಎಂಬುದನ್ನು ಪತ್ತೆ ಮಾಡುವಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ನಿರತರಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 8 =
Remember me
