ಕಲಬುರಗಿ:ನಗರದ ಹೊರವಲಯದಲ್ಲಿರುವ ಸಾವಳಗಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಭೀಕರ ದುರಂತ ಸಂಭವಿಸಿದ್ದು, ಗರ್ಭಿಣಿ ಸೇರಿ 7 ಜನ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರಲ್ಲಿ ಗರ್ಭಿಣಿ ಸೇರಿ ನಾಲ್ವರು ಮಹಿಳೆಯರು ಹಾಗೂ ಮೂವರು ಪುರುಷರು. ಇವರೆಲ್ಲರೂ ಆಳಂದ ತಾಲೂಕಿನ ನಿವಾಸಿಗಳು.
ಗರ್ಭಿಣಿಯನ್ನು ಹೆರಿಗೆಗಾಗಿ ಕಲಬುರಗಿಗೆ ಕರೆದುಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ ಬೇಗಂ (50), ಅಬೇದಾಬಿ ಬೇಗಂ (50), ಜಯಚುನಬಿ (60) ಹಾಗೂ ಮುನೀರ್ (28), ಮಹಮ್ಮದ್ ಅಲಿ (38), ಶೌಕತ್ ಅಲಿ (29) ಎಂಬುವವರೇ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:Web Exclusive: ಬಂಜರು ಭೂಮಿಗೆ ನ್ಯಾಯ ನೀಡಿದ ವಕೀಲ; ಬಂಗಾರದ ಬೆಳೆ ತೆಗೆದ ಸಾಧಕ
ಕಲಬುರಗಿ ನಗರ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 1 =
Remember me
