ಬೆಂಗಳೂರು: ಕರೊನಾ ವೈರಸ್​ ಸೋಂಕಿತನಿಗೆ ಚಿಕಿತ್ಸೆ ನೀಡಿ ಕ್ಲಿನಿಕ್​ನಲ್ಲಿ ಬಚ್ಚಿಟ್ಟಿಕೊಂಡಿದ್ದ ವೈದ್ಯನನ್ನು ಮನವೊಲಿಸಿ ಕ್ವಾರಂಟೈನ್​ಗೆ ಒಳಪಡಿಸಿರುವ ಘಟನೆ ನಡೆದಿದೆ.
ಹೊಂಗಸಂದ್ರದ ಕ್ಲಿನಿಕ್​ನಲ್ಲಿ ವೈದ್ಯ ಇತ್ತೀಚೆಗೆ ಜ್ವರ ಬಂದ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ಪಡೆದ ವ್ಯಕ್ತಿಗೆ ಕರೊನಾ ಸೋಂಕು ಇರುವುದು ಪರೀಕ್ಷೆಯಿಂದ ಪತ್ತೆಯಾದ ಬಳಿಕ ಜಿಲ್ಲಾಧಿಕಾರಿ ವೈದ್ಯನನ್ನು ಪತ್ತೆ ಮಾಡಿ ಕ್ವಾರಂಟೈನ್​ಗೆ ಒಳಪಡಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚಿಸಿದ್ದರು.
ಆರೋಗ್ಯ ಇಲಾಖೆ ಸಿಬ್ಬಂದಿ ಕೂಡಲೇ ಹೊಂಗಸಂದ್ರಕ್ಕೆ ತೆರಳಿ ವೈದ್ಯನನ್ನು ಕ್ವಾರಂಟೈನ್​ಗೆ ಒಳಗಾಗುವಂತೆ ತಿಳಿಸಿದರು. ಇದರಿಂದ ಹೆದರಿದ ವೈದ್ಯ ಕ್ಲಿನಿಕ್​ ಬಾಗಿಲು ಮುಚ್ಚಿ ಬಚ್ಚಿಟ್ಟುಕೊಂಡಿದ್ದರು. ಮನವೊಲಿಸಿ ಅವರನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಕರೆದುಕೊಂಡು ಬಂದರು.
ಜಿಲ್ಲಾಧಿಕಾರಿಗಳು ವೈದ್ಯನನ್ನು ಇಂದಿರಾ ನಗರದ ಇಎಸ್​ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​ಗೆ ಒಳಗಾಗುವಂತೆ ಸೂಚಿಸಿದರು. ಕೂಡಲೇ ಅವರನ್ನು ಇಂದಿರಾನಗರದ ಇಎಸ್​ಐ ಆಸ್ಪತ್ರೆಗೆ ದಾಖಲಿಸಲಾಯಿತು.
ಎಲ್ಲ ರಾಜ್ಯಗಳ ಸಿಎಂ ಜತೆ ಏ.27ರಂದು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಂವಾದ : ಲಾಕ್​ಡೌನ್ ಬಗ್ಗೆ ಚರ್ಚೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
