ಕಲಬುರಗಿ:ಮಹಿಂದ್ರಾ ಪಿಕ್ ಅಪ್ ವಾಹನವೊಂದು ಮಗುಚಿ 15 ಶಾಲಾ ವಿದ್ಯಾರ್ಥಿಗಳು ಗಾಯಗೊಂಡಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮಡಕಿ ಬಳಿ ಘಟನೆ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸರ್ಕಾರಿ ಬಸ್ ಸರಿಯಾದ ಸಮಯಕ್ಕೆ ಬಾರದ ಹಿನ್ನೆಲೆ ಶಾಲೆ ಮುಗಿಸಿ ಮಹಗಾಂವ್​ನಿಂದ ಮಡಕಿ ತಾಂಡಾಕ್ಕೆ ವಿದ್ಯಾರ್ಥಿಗಳು ಪಿಕ್​ಅಪ್​ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ದಾರಿ ಮಧ್ಯೆ ಪಿಕ್​ಅಪ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಾಳು ಶಾಲಾ ವಿದ್ಯಾರ್ಥಿಗಳನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಪಘಾತದಲ್ಲಿ ನಾಲ್ಕು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿತ್ತು. ಮಳಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಮಳಗಿಯಿಂದ ಕೊಳಗಿ ಎಂಬಲ್ಲಿಗೆ ಟ್ರ್ಯಾಕ್ಟರ್​​ನಲ್ಲಿ ತುಂಬಿಸಿಕೊಂಡು ಪ್ರವಾಸ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ದಾರಿಮಧ್ಯೆ ಟ್ರ್ಯಾಕ್ಟರ್ ಪಲ್ಟಿಯಾಗಿತ್ತು. 40 ವಿದ್ಯಾರ್ಥಿಗಳನ್ನು ಒಂದೇ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಪ್ರವಾಸಕ್ಕೆ ಹೋಗಿದ್ದರು. ಟ್ರ್ಯಾಕ್ಟರ್ ಪಲ್ಟಿಯಾಗಿ 26 ಜನ ವಿದ್ಯಾರ್ಥಿಗಳು ಗಾಯಗೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 12 =
Remember me
