ತುಮಕೂರು:ಅವರ ಪಾಡಿಗೆ ಆಟವಾಡಿಕೊಂಡು ಇದ್ದ ಮಕ್ಕಳ ಮೇಲೆ ಒಮ್ಮೆಲೆ ಕಂಬವೊಂದು ಬಿದ್ದಾಗ ಹೇಗಾಗಿರಬೇಡ?! ಹೌದು, ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ತಮ್ಮ ಪಾಡಿಗೆ ಇದ್ದ ಶಾಲಾ ಮಕ್ಕಳ ಮೇಲೆ ಒಮ್ಮೆಲೆ ಹಳೆ ಕಟ್ಟಡದ ಕಲ್ಲು ಕಂಬಗಳು ಕುಸಿದು ಬಿದ್ದಿವೆ. ಅಲ್ಲಿದ್ದ ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಆದರೆ ದುರದೃಷ್ಟವಶಾತ್​ ಓರ್ವ ಮಾತ್ರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಉಲ್ಲಾಸ್ ಎನ್ನುವಾತ ಗಂಭೀರವಾಗಿ ಗಾಯಗೊಂಡಿದ್ದು ಯಶಸ್, ಹಾಗೂ ಕುಶಾಲ್ ಎಂಬ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿರುವ ಘಟನೆ ನಡೆದಿದ್ದು ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನ 8 ಕಲ್ಲಿನ ಕಂಬಗಳಲ್ಲಿ ಒಟ್ಟು ಮೂರು ಕಂಬಗಳು ಕುಸಿದು ಬಿದ್ದಿವೆ.
ಇದೀಗ ಗಂಭೀರವಾಗಿ ಗಾಯಗೊಂಡಿರುವ ಉಲ್ಲಾಸ್​ಗೆ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದೆ. ಯಶಸ್ ಹಾಗೂ ಕುಶಾಲ್​ಗೆ ಗೋಡೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ದೌಡಯಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:17 − 2 =
Remember me
