ತಿರುವನಂತಪುರ:ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಅವರ ಮದುವೆ ಮುಹಮದ್ ರಿಯಾಸ್ ಎಂಬವರೊಂದಿಗೆ ನಡೆಯುವುದು ಖಚಿತವಾಗಿದೆ ಎಂದು ಕೇರಳದ ಸ್ಥಳೀಯ ಪತ್ರಿಕೆಗಳು ಮಂಗಳವಾರ ವರದಿ ಮಾಡಿವೆ.
ರಿಯಾಸ್ ಅವರು ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಜೂನ್ 15ರಂದು ಅತ್ಯಂತ ಸಂಬಂಧಿಕರು ಮತ್ತು ಆಪ್ತ ಸ್ನೇಹಿತ ಬಳಗದ ಸಮ್ಮುಖದಲ್ಲಿ ಸರಳ ರೀತಿಯಲ್ಲಿ ಮದುವೆ ನೆರವೇರಲಿದೆ ಎಂದು ಮನೋರಮಾಆನ್‌ಲೈನ್ ವರದಿ ಮಾಡಿದೆ.
ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ ಪ್ರಾರಂಭಿಸಿದ ರಿಯಾಸ್, ಡಿವೈಎಫ್‌ಐ ಸಂಘಟನೆಯ ರಾಜ್ಯ ಅಧ್ಯಕ್ಷರಾಗಿ ಎರಡು ಅವಧಿ ಕಾರ್ಯ ನಿರ್ವಹಿಸಿದ್ದಾರೆ. 2009ರ ಲೋಕಸಭಾ ಚುನಾವಣೆಯಲ್ಲಿ ಅವರು ಕೋಯಿಕ್ಕೋಡ್ ಕ್ಷೇತ್ರದಲ್ಲಿ ಸಿಪಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಕಾಂಗ್ರೆಸ್ ನಾಯಕ ಎಂ.ಕೆ. ರಾಘವನ್ ವಿರುದ್ಧ ಸೋತರು. ವೀಣಾ ಅವರು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯಮಿಯಾಗಿದ್ದಾರೆ.
ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಮುಗಿಯುತ್ತಿದ್ದಂತೆ ತಾರಕಕ್ಕೇರಿತು ಅರ್ಜುನ್​ ಸರ್ಜಾ ಸಿಟ್ಟು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
