ಬೆಂಗಳೂರುಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾಗಿರುವ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ (6ರಿಂದ 8ನೇ ತರಗತಿ) ‘ಸಿ’ ವಲಯದ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಕೆಲವೊಂದು ಜಿಲ್ಲೆಗಳಲ್ಲಿ ‘ಸಿ’ ವಲಯದ ಖಾಲಿ ಹುದ್ದೆಗಳು ಲಭ್ಯವಿಲ್ಲದ ಕಾರಣ ಅಂತಹ ಶಿಕ್ಷಕರಿಗೆ ಆಯಾ ವ್ಯಾಪ್ತಿಯ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ತಾತ್ಕಾಲಿಕವಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಅದರಂತೆ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಂಡು ಕಾರ್ಯನಿರ್ವಹಿಸುತ್ತಿರುವ 718 ಶಿಕ್ಷಕರಿಗೆ ‘ಸಿ’ ವಲಯದ ಲಭ್ಯ ಖಾಲಿ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ಹಂಚಿಕೆ ಮಾಡಿ ಆದೇಶಿಸಲಾಗಿದೆ. ಇನ್ನು 609 ಅಭ್ಯರ್ಥಿಗಳಿಗೆ ‘ಸಿ’ ವಲಯದಲ್ಲಿ ಹುದ್ದೆ ಲಭ್ಯವಿಲ್ಲದ ಕಾರಣ ಅವಕಾಶ ಕಲ್ಪಿಸಲಾಗಿಲ್ಲ. ಇಂತಹ ಶಿಕ್ಷಕರಿಗೆ ಜು.3ರಂದು ಖಾಲಿ ಹುದ್ದೆಗಳ ಪ್ರಕಟಣೆ ಹೊರಡಿಸಿ ಜು.4ರಂದು 11.30 ಗಂಟೆಗೆ ಜಿಲ್ಲಾವಾರು ನಡೆಯುವ ಸ್ಥಳ ಹಂಚಿಕೆ ಮಾಡುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ತಾತ್ಕಾಲಿಕವಾಗಿ ಸ್ಥಳ ಆಯ್ಕೆ ಮಾಡಿಕೊಂಡಿರುವ ಎಲ್ಲ ಶಿಕ್ಷಕರು ಕೌನ್ಸೆಲಿಂಗ್‌ನಲ್ಲಿ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಬೇಕು. ಈ ಸಂಬಂಧ ಜಿಲ್ಲಾ ಉಪ ನಿರ್ದೇಶಕರು ಜು.1ರಂದು ಸಂಬಂಧಪಟ್ಟ ಶಿಕ್ಷಕರಿಗೆ ಲಿಖಿತವಾಗಿ ಸೂಕ್ತ ಸೂಚನೆ ನೀಡಿ ಸ್ವೀಕೃತಿ ಪಡೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಈ ಹಿಂದೆ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿ ಮತ್ತು ನೇಮಕಾತಿ ಆದೇಶಗಳನ್ನು ನೀಡದಿರುವ ಅಭ್ಯರ್ಥಿಗಳಿಗೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ನೇಮಕಾತಿ ಆದೇಶ ಪಡೆದು ನೇಮಕಗೊಂಡಿರುವ 11,494 ಅಭ್ಯರ್ಥಿಗಳು ಸುಪ್ರೀಕೋರ್ಟ್‌ನ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತಾರೆ. ಆದ್ದರಿಂದ ನೇಮಕಾತಿ ಸಂಬಂಧ ಮುಂದಿನ ದಿನಗಳಲ್ಲಿ ಎದುರಾಗುವ ಎಲ್ಲ ಪರಿಣಾಮಗಳು ಮತ್ತು ಗೊಂದಗಳಿಗೆ ಡಿಡಿಪಿಐ ಗಳೇ ಜವಾನ್ದಾರರಾಗಿರುತ್ತಾರೆ. ಈ ಕಾರಣದಿಂದ ಎಚ್ಚರಿಕೆ ವಹಿಸುವಂತೆ ಶಾಲಾ ಶಿಕ್ಷಣ ಆಯುಕ್ತರು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 2 =
Remember me
