ಬೆಂಗಳೂರು:ದೇವನಹಳ್ಳಿ ಕೈಗಾರಿಕಾ ಪ್ರದೇಶದ ಎರಡನೇ ಹಂತದಲ್ಲಿ ನಿರ್ಮಾಣವಾಗುತ್ತಿರುವ ತನ್ನ ಲಿಥಿಯಂ ಬ್ಯಾಟರಿ ಸೆಲ್ ಉತ್ಪಾದನಾ ಸಾಮರ್ಥ್ಯವನ್ನು ಎರಡು ಪಟ್ಟು ಹೆಚ್ಚಿಸುವ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ 40 ಎಕರೆ ಜಾಗವನ್ನು ನೀಡುವಂತೆ ಎಕ್ಸೈಡ್ ಎನರ್ಜಿ ಕಂಪನಿ ಪ್ರಸ್ತಾವನೆ ಸಲ್ಲಿಸಿದೆ.
ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಡಾ.ಮಂದಾರ್ ವಿ. ದಿಯೋ ಅವರ ನೇತೃತ್ವದಲ್ಲಿ ಕಂಪನಿ ಪ್ರತಿನಿಧಿಗಳು ಸೋಮವಾರ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿ ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಮಾತುಕತೆ ನಡೆಸಿದರು.
ಇದನ್ನೂ ಓದಿ:ಕರ್ನಾಟಕದಲ್ಲಿ ಪ್ರತಿ ಗಂಟೆಗೆ 19 ಮಂದಿಗೆ ಬೀದಿನಾಯಿ ಕಡಿತ!; ಈ ವಿಷಯದಲ್ಲಿ ದೇಶದಲ್ಲಿ ರಾಜ್ಯಕ್ಕೆ ಐದನೇ ಸ್ಥಾನ
ಕಂಪನಿಯು ಈಗಾಗಲೇ ದೇವನಹಳ್ಳಿ ಕೈಗಾರಿಕಾ ಪ್ರದೇಶದ ಎರಡನೇ ಹಂತದಲ್ಲಿ 6,000 ಗಿಗಾವಾಟ್ ಸಾಮರ್ಥ್ಯದ ಲಿಥಿಯಂ ಸೆಲ್ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, ಅದರ ನಿರ್ಮಾಣ ಕಾರ್ಯ ಕೈಗೊಂಡಿದೆ. ಅದು 2024ರಲ್ಲಿ ತನ್ನ ಕಾರ್ಯಾಚರಣೆ ಆರಂಭಿಸಲಿದೆ. ಇದರ ಜೊತೆಗೆ ಉತ್ಪಾದನಾ ಸಾಮರ್ಥ್ಯ ಇನ್ನೂ 6,000 ಗಿಗಾವಾಟ್ ಹೆಚ್ಚಿಸಬೇಕೆಂಬ ಯೋಜನೆಯನ್ನು ಕಂಪನಿ ಹೊಂದಿದೆ. ಈ ಎರಡೂ ಘಟಕಗಳಿಗೆ ಒಟ್ಟಾರೆ ಮಾಡುವ ಹೂಡಿಕೆ 6,000 ಕೋಟಿ ರೂಪಾಯಿಗಳಷ್ಟು ಆಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ:ಚಂದ್ರಯಾನ-3: ತಿರುಪತಿಯಲ್ಲಷ್ಟೇ ಅಲ್ಲ, ಕುಕ್ಕೆ ಸುಬ್ರಹ್ಮಣ್ಯದಲ್ಲೂ ಪೂಜೆ!
ಕಂಪನಿಯ ಈ ಪ್ರಸ್ತಾವವನ್ನು ಎಂ.ಬಿ.ಪಾಟೀಲ ಅವರು ಸ್ವಾಗತಿಸಿದ್ದಾರೆ. ಎಲೆಕ್ಟ್ರಿಕ್ ವಾಹನೋದ್ಯಮವನ್ನು ರಾಜ್ಯದಲ್ಲಿ ಸದೃಢವಾಗಿ ಬೆಳೆಸಬೇಕೆಂಬ ಸರ್ಕಾರದ ಉದ್ದೇಶಕ್ಕೆ ಇದು ಪೂರಕವಾಗಿದೆ. ಕಂಪನಿಯ ಪ್ರಸ್ತಾವವನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಮುಂಬರುವ 2024ರಲ್ಲಿ ಪ್ರಸ್ತಾವಿಸಲಾಗಿರುವ ಎರಡನೇ ಘಟಕದ ನಿರ್ಮಾಣಕ್ಕೆ ಚಾಲನೆ ನೀಡಬೇಕೆಂಬುದು ಕಂಪನಿಯ ಉದ್ದೇಶ ಎಂದೂ ತಿಳಿಸಿದ್ದಾರೆ.
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಇದ್ದರು. ಎಕ್ಸೈಡ್ ಕಂಪನಿಯ‌ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ವೀರಭದ್ರ ಕೂಡ ಇದ್ದರು.
ಪತಿ ಯಾವುದೇ ಕ್ಷಣದಲ್ಲೂ ನಮ್ಮನ್ನು ಕೊಲ್ಲಬಹುದು: ಮಕ್ಕಳಿಬ್ಬರ ಸಹಿತ ವಿಡಿಯೋ ಮಾಡಿ ಸಹಾಯ ಕೇಳಿದ ಪತ್ನಿ

ಆಣೆ ಮಾಡುವ ಹಂತಕ್ಕೆ ತಲುಪಿತು ಸೌಜನ್ಯಾ ಪ್ರಕರಣ; ಇಬ್ಬರ ಮಧ್ಯೆ ಆರೋಪ, ದೇವರ ಮುಂದೆ ಪ್ರಮಾಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − three =
Remember me
