ಬೆಂಗಳೂರು:ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ.
ಸುಗಮ ಸಂಚಾರ:‘ಅಮೃತ’ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ಅನುಷ್ಠಾನಗೊಳಿಸಲಾಗುತ್ತಿದೆ. ವೆಚ್ಚದ ಕಾಮಗಾರಿಗಳನ್ನು ಯೋಜನೆಯ ಅಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ಬರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.
ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ ಕೃತಕ ಬುದ್ಧಿಮತ್ತೆಯ (Artificial Intelligence) ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ Seamless Signalling ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.
ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿ.ಇ.ಎಲ್ ರಸ್ತೆಯ ವರೆಗೆ Integrated ಮೇಲ್ವೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದಾಗಿಯೂ ನಿರ್ಧಾರ ತೆಗೆದುಕೊಳ್ಳಲಾಗಿದೆ.
1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.
ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳನ್ನು ಮನರ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುವುದು. ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
ಬೆಂಗಳೂರು ಮೆಟ್ರೋ ರೈಲು ಯೋಜನೆಯ ಒಟ್ಟು 56 ಕಿ.ಮೀ.ಗಳ ಜಾಲವು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 30 ನಿಲ್ದಾಣಗಳೊಂದಿಗೆ, 58.19 ಕಿ.ಮೀ.ಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ವೇಗದಲ್ಲಿ ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ 40.15 ಕಿ.ಮೀ. ಉದ್ದದ ಮೆಟ್ರೋ ಮಾರ್ಗಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿದೆ.
ಹಿಂದಿನ ಆಯವ್ಯಯದಲ್ಲಿ ಮೆಟ್ರೋ ಜಾಲದ 3ನೇ ಹಂತದ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. 44.65 ಕಿ.ಮೀ. ಉದ್ದದ 3] ನಿಲ್ದಾಣಗಳನ್ನು ಒಳಗೊಂಡಂತೆ 2 ಮಾರ್ಗಗಳ ವಿಸ್ತ್ರತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಇದಕ್ಕೆ 16,328 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮತಿ ದೊರಕಿದ ನಂತರ ಕಾಮಗಾರಿಗಳನ್ನು ಪಾರಂಭಿಸಲಾಗುವುದು.
ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ. ಉದ್ದದ Satellite Town Ring Road ಅನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ.
ಬೆಂಗಳೂರು ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (BSRP) ರಾಜ್ಯ ಸರ್ಕಾರ ಮತ್ತು ರೈಲ್ವೆ ಮಂತ್ರಾಲಯವು 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಹಸಿರು ನಿಶಾನೆ ನೀಡಿವೆ. ಈಗಾಗಲೇ ಹಂತದ ಕಾಮಗಾರಿಗಳು ವರ್ಷದಲ್ಲಿ ಯೋಜನೆಯ ಪ್ರಗತಿಯಲ್ಲಿದ್ದು, 2024-255 ಪೂರ್ಣಗೊಳಿಸಲಾಗುವುದು. ಈ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ 1,350 ಕೋಟಿ ರೂ.ಗಳು ಹಾಗೂ ರಾಜ್ಯ ಸರ್ಕಾರದಿಂದ 1,000 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.
ಬೆಂಗಳೂರು ಉಪನಗರ ರೈಲು ಯೋಜನೆಯ ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ನಡುವಿನ ಕಾರಿಡಾರ್-2ರ ವಯಾ-ಡಕ್ಟ್ಕಾಮಗಾರಿಗಳಿಗೆ 860 ಕೋಟಿ ರೂ. ಮೊತ್ತಕ್ಕೆ ಕಾರ್ಯಾದೇಶ ನೀಡಿದ್ದು, ಕಾಮಗಾರಿಗಳು ಪ್ರಾರಂಭವಾಗಿದೆ.
ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರಿಗೆ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಹಲವಾರು ಸಂಸ್ಥೆಗಳ ಕಾರ್ಯಾಚರಣೆಯನ್ನು ಸಮನ್ವಯಿಸಲು ಉನ್ನತಾಧಿಕಾರದ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರವನ್ನು ರಚಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
